ಆರ್. ವಿಜಯ್ ಕುಮಾರ್, ಹೇಮಂತ್‌ಕುಮಾರ್ ಅವರಿಗೆ ಮುಖ್ಯಮಂತ್ರಿ ಪದಕ

ರಾಮನಗರ : ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಗೆ ನೀಡಲಾಗುವ ಮುಖ್ಯಮಂತ್ರಿಗಳ ಪದಕಕ್ಕೆ ಜಿಲ್ಲೆಯ ಇಬ್ಬರು ಪೊಲೀಸರು ಭಾಜನರಾಗಿದ್ದಾರೆ.

ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ವ್ಯಾಪ್ತಿಗೆ ಒಳಪಡುವ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಆರ್‌. ವಿಜಯ್‌ಕುಮಾರ್ ಅವರಿಗೆ ಈ ಗೌರವ ದೊರೆತಿದೆ. ಅವರು ಈ ಹಿಂದೆ ಕೆಂಗೇರಿ, ತಲಘಟ್ಟಪುರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಕನಕಪುರ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಹೇಮಂತ್‌ಕುಮಾರ್ ಅವರೂ ಈ ಗೌರವಕ್ಕೆ ಭಾಜನರಾಗಿದ್ದಾರೆ. ಅವರು ಈ ಹಿಂದೆ ರಾಮನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಪದಕ ಪ್ರದಾನ ಸಮಾರಂಭ ನಡೆಯಲಿದೆ. ಈ ಇಬ್ಬರೂ ಅಧಿಕಾರಿಗಳನ್ನು ರಾಮನಗರ ಎಸ್‌ಪಿ ಕೆ. ಸಂತೋಷ್‌ ಬಾಬು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *