ಸಂಕಷ್ಟಗಳೆಲ್ಲವೂ ದೂರವಾಗಿ ಸಮೃದ್ಧಿ ಸದಾ ನೆಲೆಸಲಿ: ಯುಗಾದಿ ಹಬ್ಬದ ಶುಭಾಶಯ ಕೋರಿದ ಸರ್ಕಾರಿ ನೌಕರರ ಸಂಘದ ರಾಜ್ಯಾದ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾಧ್ಯಕ್ಷ ಕೆ. ಸತೀಶ್
ರಾಮನಗರ: ಸೃಷ್ಟಿಯ ಮೊದಲ ದಿನ, ಸೂರ್ಯನ ಕಿರಣದ ಮೊದಲ ದಿನ, ಹಸಿರೆಲೆಗಳು ಚಿಗುರೊಡೆಯುವ ಮೊದಲ ದಿನ, ಶುಭಕೃತು ನಾಮ ಸಂವತ್ಸರದ ಮೊದಲ ದಿನ. ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು. ಸಂಕಷ್ಟಗಳೆಲ್ಲವೂ ದೂರವಾಗಿ ಸಮೃದ್ಧಿ ಸದಾ ನೆಲೆಸಲಿ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾ ಘಟಕದ ಅಧ್ಯಕ್ಷ ಕೆ. ಸತೀಶ್ ತಿಳಿಸಿದ್ದಾರೆ.
ಯುಗವೆಂದರೆ ಸೃಷ್ಟಿಯ ಕಾಲಮಾನ. ಅರ್ಥಾತ್ ಹೊಸ ವರ್ಷ; ಆದಿ ಎಂದರೆ ಆರಂಭ. ಯುಗಾದಿ ತತ್ಸಮ ಪದವಾದರೆ ಉಗಾದಿ ತದ್ಭವ, ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ.
ವೈವಿಧ್ಯತೆಯಲ್ಲಿ ಏಕತೆಯ ಸಂದೇಶವನ್ನು ಇಡೀ ಜಗತ್ತಿಗೆ ಸಾರುವ ಭಾರತ ದೇಶದಲ್ಲಿ ಯುಗಾದಿ ಹಬ್ಬವನ್ನು ಬೇರೆ ಬೇರೆ ಕಡೆಯಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲಾಗುತ್ತದೆ. ಅಷ್ಟೇ ಅಲ್ಲದೇ ವಿಶಿಷ್ಟವಾಗಿ ಹಾಗೂ ವಿಭಿನ್ನವಾಗಿ ಯುಗಾದಿಯನ್ನು ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.