ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಮತ್ತೆ ಬದಲು! : ದಿನಾಂಕ ಹೀಗಿದೆ
ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಅಲ್ಪ ಬದಲಾವಣೆಯಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಪರಿಷ್ಕರಿಸಿದ ವೇಳಾ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಕೆಲವು ತಾಂತ್ರಿಕ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿಕೊಂಡಿದೆ.
ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ :
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ