ಸಾರ್ವತ್ರಿಕ ಚುಚ್ಚುಮದ್ದುಗಳಿಂದ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯ : ಸುರೇಶ್ ಬಾಬು
ರಾಮನಗರ : ಗರ್ಭಿಣಿಯರು ಮತ್ತು ಬಾಣಂತಿಯರು ತಪ್ಪದೇ ಕೋವಿಡ್ ಲಸಿಕೆಗಳನ್ನು ಪಡೆಯಬೇಕು ಹಾಗೂ ಬಾಣಂತಿಯರು ತಮ್ಮ ತಮ್ಮ ಮಕ್ಕಳಿಗೆ ಕಾಲಕಾಲಕ್ಕೆ ಆರೋಗ್ಯ ಇಲಾಖೆಯವರು ನೀಡುವಂತಹ ಚುಚ್ಚುಮದ್ದುಗಳನ್ನು ಮಕ್ಕಳಿಗೆ ತಪ್ಪದೇ ಕೊಡಿಸಿ ಎಂದು ಜಿಲ್ಲಾ ಪಂಚಾಯಿತಿಯ ಎಸ್ ಬಿ ಸಿ ಸಿ ಸಂಯೋಜಕ ಸುರೇಶ್ ಬಾಬು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ನಿರ್ವಹಣಾ ಸಂಶೋಧನಾ ಸಂಸ್ಥೆ ಬೆಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಗ್ಗನಹಳ್ಳಿ ವತಿಯಿಂದ ಸುಗ್ಗನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ 6 ವರ್ಷದ ಒಳಗಿನ ಮಕ್ಕಳಿಗೆ ಸಾರ್ವತ್ರಿಕ ಚುಚ್ಚುಮದ್ದು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳನ್ನು ಪೋಲಿಯೋ, ಕಾಲರಾ, ದಡಾರ ಮುಂತಾದ ಮಾರಕ ಕಾಯಿಲೆಗಳಿಂದ ಮಕ್ಕಳನ್ನು ರಕ್ಷಿಸಬೇಕು ಹಾಗೂ ಸಾರ್ವತ್ರಿಕ ಲಸಿಕೆಗಳಿಂದ ಮಕ್ಕಳನ್ನು ವಂಚಿಸಬಾರದು ಎಂದು ಈ ಮೂಲಕ ತಾಯಂದಿರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸುಗ್ಗನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾ ಅಧಿಕಾರಿ ಮಂಗಳಾ, ಶಾಲಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.