ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದ ಬಿ. ಸರೋಜಾದೇವಿ ಅವರಿಗೆ ‘ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ. ರಾಜಕುಮಾರ್ ಸಂಸ್ಕೃತಿ ದತ್ತಿ ಪ್ರಶಸ್ತಿ’ಗೆ ನಟಿ ಬಿ. ಸರೋಜಾದೇವಿ ಆಯ್ಕೆಯಾಗಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಹೊನ್ನಪ್ಪ ಭಾಗವತ ಅವರ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ 1955 ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ಅವರು, ಡಾ. ರಾಜಕುಮಾರ್, ಕಲ್ಯಾಣಕುಮಾರ್, ಉದಯಕುಮಾರ್, ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್, ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಎಂ.ಜಿ. ರಾಮಚಂದ್ರನ್, ದಿಲೀಪ್ ಕುಮಾರ್ ಸೇರಿದಂತೆ ವಿವಿಧ ಭಾಷೆಗಳ ಜನಪ್ರಿಯ ನಟರೊಂದಿಗೆ ನಟಿಸಿದ್ದಾರೆ.
ಅಮೋಘ ಅಭಿನಯ ಕೌಶಲದಿಂದ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದಲ್ಲಿನ ಅವರ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗೌರವ ಕಾರ್ಯದರ್ಶಿ ನೇ.ಭ.ರಾಮಲಿಂಗಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ. ಸರೋಜಾದೇವಿ

  • ಡಾ.ಬಿ.ಸರೋಜಾದೇವಿರವರು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಸರೋಜಾದೇವಿ ಅವರಿಗೆ ಬಾಲ್ಯದಿಂದಲೇ ಲಲಿತಕಲೆಗಳ ಬಗ್ಗೆ ಆಸಕ್ತಿ ಇತ್ತು. ಇವರಲ್ಲಿದ್ದ ಪ್ರತಿಭೆಯನ್ನು ಮೊದಲು ಗುರುತಿಸಿದವರು ಹೊನ್ನಪ್ಪ ಭಾಗವತರು. ಬಿ.ಸರೋಜಾದೇವಿ ಅಂದರೆ ಕನ್ನಡಿಗರಿಗೆ ನೆನಪಾಗುವುದು ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರ.
  • ಅರುವತ್ತರ ದಶಕದಲ್ಲಿ, ಅವರು ನಟಿಸಿರುವ ಕಪ್ಪು-ಬಿಳುಪು ಚಿತ್ರಗಳು ಇಂದಿಗೂ ಪುಳಕ ಹುಟ್ಟಿಸುತ್ತವೆ.ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ ಅವರ ಮಹಾಕವಿ ಕಾಳಿದಾಸ ಚಿತ್ರದ ಮೂಲಕ ೧೯೫೫ರಲ್ಲಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಬಿ. ಸರೋಜಾದೇವಿ ತಮ್ಮ ಅಭಿನಯ ಕೌಶಲದಿಂದ ಬಹುಬೇಗ ಚತುರ್ಭಾಷಾ ತಾರೆಯಾದವರು.
  • ಡಾ.ರಾಜ್‌ಕುಮಾರ್ಕಲ್ಯಾಣ್‌ಕುಮಾರ್, ಎ. ನಾಗೇಶ್ವರರಾವ್, ಉದಯಕುಮಾರ್, ಎನ್.ಟಿ. ರಾಮರಾವ್, ಜೆಮಿನಿ ಗಣೇಶನ್, ಶಿವಾಜಿಗಣೇಶನ್, ಎಂ.ಜಿ. ರಾಮಚಂದ್ರನ್, ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಮೊದಲಾದವರೊಂದಿಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರಗಳಲ್ಲಿ ನಟಿಸಿದ್ದಾರೆ.ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು.
  • ಹಿಂದಿಯ ದೀಲೀಪ್ ಕುಮಾರ್ ಸೇರಿದಂತೆ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ನಟಿಸಿರುವ ಸರೋಜಾದೇವಿ ಹಳೆಯ ಹಾಗೂ ಹೊಸ ಕಲಾವಿದರ ನಡುವಿನ ಕೊಂಡಿಯಾಗಿದ್ದಾರೆ.
ಬಿ. ಸರೋಜದೇವಿ

ಅಭಿನಯಿಸಿದ ಚಿತ್ರಗಳು

  • ಕಿತ್ತೂರುರಾಣಿ ಚೆನ್ನಮ್ಮ,
  • ಅಮರಶಿಲ್ಪಿ ಜಕಣಾಚಾರಿ,
  • ಕಥಾಸಾಗರ,
  • ಬಬ್ರುವಾಹನ,
  • ಭಾಗ್ಯವಂತರು,
  • ಆಷಾಡಭೂತಿ,
  • ಶ್ರೀರಾಮಪೂಜಾ,
  • ಕಚ ದೇವಯಾನಿ,
  • ರತ್ನಗಿರಿ ರಹಸ್ಯ,
  • ಕೋಕಿಲವಾಣಿ,
  • ಸ್ಕೂಲ್‌ಮಾಸ್ಟರ್,
  • ಪಂಚರತ್ನ,
  • ಲಕ್ಷ್ಮೀಸರಸ್ವತಿ,
  • ಚಿಂತಾಮಣಿ,
  • ಭೂಕೈಲಾಸ,
  • ಅಣ್ಣತಂಗಿ,
  • ಜಗಜ್ಯೋತಿ ಬಸವೇಶ್ವರ,
  • ಕಿತ್ತೂರುಚೆನ್ನಮ್ಮ,
  • ದೇವಸುಂದರಿ,
  • ವಿಜಯನಗರದ ವೀರಪುತ್ರ,
  • ಮಲ್ಲಮ್ಮನ ಪವಾಡ,
  • ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ,
  • ಪೂರ್ಣಿಮಾ,
  • ಗೃಹಿಣಿ,
  • ಪಾಪಪುಣ್ಯ,
  • ಸಹಧರ್ಮಿಣಿ,
  • ಶ್ರೀನಿವಾಸಕಲ್ಯಾಣ,
  • ಚಾಮುಂಡೇಶ್ವರಿ ಮಹಿಮೆ,
  • ಚಿರಂಜೀವಿ,
  • ಶನಿಪ್ರಭಾವ ಮೊದಲಾದ ಚಿತ್ರಗಳ ಮೂಲಕ ಭಾರಿ ಜನಪ್ರಿಯತೆ ಗಳಿಸಿದರು.

ಪದವಿ/ಪುರಸ್ಕಾರಗಳು

  • ೧೯೯೨ರಲ್ಲಿ ಕೇಂದ್ರ ಸರಕಾರದ ‘ಪದ್ಮಭೂಷಣ ಪ್ರಶಸ್ತಿ
  • ೧೯೬೯ರಲ್ಲಿ ಕೇಂದ್ರ ಸರಕಾರದ ಪದ್ಮ ಶ್ರೀ ಪಡೆದಿದ್ದಾರೆ.
  • ೧೯೬೯ರಲ್ಲಿ ರಷ್ಯ ಸರ‍ಕಾರದ ಆಮಂತ್ರಣದ ಮೇರೆಗೆ ರಷ್ಯದಲ್ಲಿ ನಡೆದ ‘೪ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಭಾಗವಹಿಸಿದ್ದರು.
  • ೨೦೦೬ನೇ ಸಾಲಿನ ‘ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ‘ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್’ ರಿಂದ ‘ಜೀವಿತಾವಧಿ ಸಾಧನೆ ಪ್ರಶಸ್ತಿ’ಯನ್ನು ಪಡೆದಿದ್ದಾರೆ.

ಮಾಹಿತಿ : ವಿಕಿಪೀಡಿಯಾ ಒಂದು ಸ್ವತಂತ್ರ ವಿಶ್ವಕೋಶ

ನೆರವು ನೀಡಿ :

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ವಸ್ತುನಿಷ್ಠ, ವರದಿ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತಿದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ. ಗೂಗಲ್ ಪೇ ಅಥವಾ ಪೋನ್ ಪೇ ಮಾಡಿ – 9880439669 (Rudreshwara S)

Leave a Reply

Your email address will not be published. Required fields are marked *