ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ : ಜೀವಜಲ ಯೋಜನೆ ಸಾಮೂಹಿಕ/ವೈಯಕ್ತಿಕ ಕೊಳವೆ ಬಾವಿ ಕೊರೆಸಲು ಅರ್ಜಿ ಆಹ್ವಾನ

ರಾಮನಗರ : ಕರ್ನಾಟಕ ವೀರಶೈವ ಲಿಂಗಾಯತ ನಿಗಮದ 2021-22ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ವೀರಶೈವ ಲಿಂಗಾಯತ ಸಮುದಾಯದ 3ಬಿ ಯಲ್ಲಿ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ಕೆಳಕಂಡಂತಹ ಅರ್ಹತೆ ಹೊಂದಿರಬೇಕಾಗಿರುತ್ತದೆ.

ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿದ್ದು, ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಹಾಗೂ ಅತಿಸಣ್ಣ ರೈತರಾಗಿರಬೇಕು.
ವಾರ್ಷಿಕ ವರಮಾನ ರೂ.40,000/-ಗಳ ಮಿತಿಯಲ್ಲಿರಬೇಕು.
ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳ ಮಿತಿಯೊಳಗಿರಬೇಕು.

ವೈಯಕ್ತಿಕ ನೀರಾವರಿ ಕೊಳವೆಬಾವಿಗಳಿಗೆ ಘಟಕ ವೆಚ್ಚ ರೂ.4.00 ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ ರೂ.3.50ಲಕ್ಷ ಸಹಾಯಧನ ಹಾಗೂ ರೂ.50,000/-ಗಳ ಶೇ.4ರ ಬಡ್ಡಿ ದರದ ಸಾಲ ಒಳಗೊಂಡಿದ್ದು,ನಿಗದಿತ ಘಟಕ ವೆಚ್ಚದಿಂದ ಜೀವಜಲ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ.


ಜೀವಜಲ ಯೋಜನೆ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗದ ಫಲಾಪೇಕ್ಷಿಗಳು ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಛೇರಿ #102, ಮೊದಲನೇ ಮಹಡಿ, 3ನೇ ಕ್ರಾಸ್, 1ನೇ ಬ್ಲಾಕ್, ಉತ್ತರ ಬಡಾವಣೆ, 1ನೇ ಫೇಸ್, ರತ್ನಾಕರ ಬ್ಯಾಂಕ್ ಪಕ್ಕ, ಬಿ.ಎಂ.ರಸ್ತೆ, ರಾಮನಗರ ಟೌನ್, ರಾಮನಗರ ಜಿಲ್ಲೆ. ದೂರವಾಣಿ ಸಂಖ್ಯೆ : 080-27275114, 080-27271554 ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಛೇರಿಗೆ ಸಲ್ಲಿಸತಕ್ಕದ್ದು ಕಡೆಯ ದಿನಾಂಕ: 25-04-2022ವಾಗಿರುತ್ತದೆ.

Leave a Reply

Your email address will not be published. Required fields are marked *