ಜಾಬ್ ಬೂಸ್ಟರ್ ಹಾಗೂ ರೀಡ್ ಸೆಂಟರ್ ಸಂಸ್ಥೆ ವತಿಯಿಂದ ಉದ್ಯೋಗ ಮೇಳ
ರಾಮನಗರ : ಇಲ್ಲಿನ ಪಿಎಲ್‌ಡಿ ಬ್ಯಾಂಕ್ ರಸ್ತೆಯಲ್ಲಿರುವ ಇರುಳಿಗ ಅರಣ್ಯವಾಸಿ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯಲ್ಲಿ ಗುರುವಾರ ಜಾಬ್ ಬೂಸ್ಟರ್ ಹಾಗೂ ರೀಡ್ ಸೆಂಟರ್ ಸಂಸ್ಥೆ ವತಿಯಿಂದ ಉದ್ಯೋಗ ಮೇಳ ನಡೆಯಿತು.
ಪ್ರತಿ ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳವನ್ನು ನಡೆಸುತ್ತೇವೆ. ಆಯ್ಕೆಯಾದವರಿಗೆ ತರಬೇತಿ ನೀಡಲಾಗುವುದು, ಜೊತೆಗೆ ವಿವಿಧ ಖಾಸಗಿ ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗವನ್ನು ದೊರಕಿಸಿ ಕೊಡುತ್ತೇವೆ ಎಂದು ಜಾಬ್ ಬೂಸ್ಟರ್ ಸಂಸ್ಥೆಯ ಪ್ರೋಗ್ರಾಂ ಡೈರೆಕ್ಟರ್ ದೇವಸಗಾಯಂ ತಿಳಿಸಿದರು.

ಜಾಬ್ ಬೂಸ್ಟರ್ ಸಂಸ್ಥೆಯು ಚನ್ನೈ, ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೆ ಸಾವಿರಾರು ಮಂದಿಗೆ ಉದ್ಯೋಗವನ್ನು ದೊರಕಿಸಿ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿನ ರೀಡ್ ಸೆಂಟರ್ ಸಂಸ್ಥೆಯ ಎಕ್ಸಿಕ್ಯೂಟೀವ್ ಡೈರೆಕ್ಟರ್ ಶ್ಯಾಮ್ ಚಲ್ಲ ದೊರೈ ಮಾತನಾಡಿ ರಾಮನಗರ ಜಿಲ್ಲೆಯಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಉದ್ಯೋಗ ಮೇಳವನ್ನು ನೆಡಸಲಾಗುವುದು. ಪ್ರಸ್ತುತ ಸಂದರ್ಭದಲ್ಲಿ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಅವರಿಗೆ ಸೂಕ್ತ ಉದ್ಯೋಗ ದೊರೆಯುತ್ತಿಲ್ಲ. ನಾವು ಆಯ್ಕೆಯಾದವರಿಗೆ ಸೂಕ್ತ ತರಬೇತಿಯನ್ನು ನೀಡಿ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುತ್ತೇವೆ, ಜೊತೆಗೆ ಉದ್ಯೋಗವನ್ನು ಕೊಡಿಸುತ್ತೇವೆ ಎಂದು ತಿಳಿಸಿದರು.

ಇರುಳಿಗ ಅರಣ್ಯವಾಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಇರುಳಿಗ, ಪ್ರಧಾನ ಕಾರ್ಯದರ್ಶಿ ಜೆ.ಎಲ್. ಶಿವರಾಜ್, ಮುಖಂಡರಾದ ಮಂಜುನಾಥ್, ಶ್ರೀನಿವಾಸ್ ಇದ್ದರು.