ನಾಳೆ (ಏ.16) ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ರಾಮನಗರ : ಕೇಂದ್ರ ಸರ್ಕಾರದ ವ್ಯಾಪಕ ಬೆಲೆ ಏರಿಕೆ, ಭ್ರಷ್ಟಾಚಾರ,, ರಾಜ್ಯ ಸರ್ಕಾರದ 40% ಕಮಿಷನ್ ಹಾಗೂ ಆಡಳಿತ ವೈಫಲ್ಯಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ದಿನಾಂಕ/16/04/2022ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸನ್ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನೆಚ್ಚಿನ ಸಂಸದರಾದ ಸನ್ಮಾನ್ಯ ಶ್ರೀ ಡಿ ಕೆ ಸುರೇಶ್ ರವರ ಉಪಸ್ಥಿತಿಯಲ್ಲಿ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ.
ಈ ಹೋರಾಟದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ ಎಂ ಲಿಂಗಪ್ಪ ನವರು, ಶ್ರೀ ಎಸ್ ರವಿ ರವರು, ಮಾಜಿ ಶಾಸಕರಾದ ಎಚ್ ಸಿ ಬಾಲಕೃಷ್ಣ ರವರು. ಕೆ ರಾಜು ರವರು, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಹೆಚ್ ಎ ಇಕ್ಬಾಲ್ ಹುಸೇನ್ ರವರು, ಜಿಲ್ಲಾಧ್ಯಕ್ಷರಾದ ಎಸ್ ಗಂಗಾಧರ್ ರವರು ಹಾಗೂ ರಾಮನಗರ ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ನಗರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಮಾಜಿ ತಾಪಂ, ಜಿಪಂ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಪಕ್ಷದ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಮುಖಂಡರುಗಳು ಕಾರ್ಯಕರ್ತರು ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ತಾವು ಸಹ ಭಾಗಿಯಾಗಿ ಈ ಹೋರಾಟಕ್ಕೆ ಕೈಜೋಡಿಸುವ ಮುಖಾಂತರ ಸಂತೋಷ್ ರವರ ಆತ್ಮಹತ್ಯೆಗೆ ನ್ಯಾಯ ಒದಗಿಸುವಲ್ಲಿ ಸಹಕರಿಸಬೇಕಾಗಿ ತಮ್ಮಲ್ಲಿ ಕೋರುತ್ತೇನೆ.
ವಂದನೆಗಳೊಂದಿಗೆ…
ಬಿ. ಸಿ. ಪಾರ್ವತಮ್ಮ ಅಧ್ಯಕ್ಷರು, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ರಾಮನಗರ.