ಬೇವೂರು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಚನ್ನಪಟ್ಟಣ : ಬೇವೂರು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಳಿ ಸಂಘದ ವತಿಯಿಂದ ಡಾ.ಬಿ.ಆರ್‌.ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರ ವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು.
ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾ ನಮನ ಸಲ್ಲಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬೇವೂರು ಯೋಗೀಶಗೌಡ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ್ ಅವರು ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ದೊಡ್ಡ ಶಕ್ತಿ ಆಗಿದ್ದಾರೆ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿಯಾಗಿದ್ದು ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಜೀವನಕ್ಕೆ ದಾರಿದೀಪವಾಗಬೇಕು ಎಂದು ಹೇಳಿದರು.
1891ರ ಏಪ್ರಿಲ್ 14ರಂದು ಮಧ್ಯಪ್ರದೇಶದ ಮಾಹೋ ಎಂಬಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನಿಸಿದ್ದರು. ಅದು ಅಸ್ಪೃಶ್ಯತೆ ಬಲವಾಗಿ ಬೇರೂರಿದ್ದ ಕಾಲ. ಬಾಲ್ಯದಲ್ಲಿ ಅಂಬೇಡ್ಕರ್ ಅವರು ಬಹಳ ಕಷ್ಟಗಳನ್ನು ಅನುಭವಿಸಿದ್ದರು. ಕೇವಲ ನಿರ್ದಿಷ್ಟ ಕ್ಷೇತ್ರ ಮತ್ತು ಜನಾಂಗಕ್ಕೆ ಸೀಮಿತವಾಗಿರದೆ, ದೇಶದ ಸವಾಂಗೀಣ ವಿಕಾಸಕ್ಕೆ ಮತ್ತು ಸರ್ವ ಜನಾಂಗದ ಏಳ್ಗೆಗೆ ಮುನ್ನುಡಿ ಬರೆದವರು. ಜೀವನದುದ್ದಕ್ಕೂ ಅನೇಕ ನೋವುಗಳುಂಡು ದೇಶದ ಏಕತೆ ಮತ್ತು ಹಿತಕ್ಕಾಗಿ ಶ್ರಮಿಸಿದ ರಾಷ್ಟ್ರಪ್ರೇಮಿ ಅವರಾಗಿದ್ದರು ಎಂದರು.
ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಅವರು ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು.

ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಈ ಮಹಾನ್ ನಾಯಕರ ಕೊಡುಗೆಯನ್ನು ಸ್ಮರಿಸಲು ಏಪ್ರಿಲ್ 14ರಂದು ಪ್ರತಿವರ್ಷ ಅಂಬೇಡ್ಕರ್ ಜಯಂತಿಯನ್ನು ಆಚರಿಸುತ್ತದೆ. ಇಂತಹ ಮಹತ್ವದ ದಿನದಂದು ನಮ್ಮ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಸ್ಫೂರ್ತಿದಾಯಕಗಳು ಬದುಕಿನಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೇವೂರು ಗ್ರಾಪಂ ಅಧ್ಯಕ್ಷ ರಮೇಶ್, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಡೈರಿ ರಾಮಯ್ಯ , ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸತೀಶ್, ರಾಜಣ್ಣ , ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ಮಾಜಿ ಖಜಾಂಚಿ ವಿಜಯೇಂದ್ರ , ಮಾಜಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಮಧುಸೂಧನ್, ದಿನೇಶ್, ವ್ಯವಸಾಯ ಸಹಕಾರ ಸಂಘದ ಮಾಜಿ ನಿರ್ದೇಶಕ ಸಿದ್ಧರಾಜು, ಸಿದ್ಧರಾಮೇಶ್ವರ ವಿದ್ಯಾಸಂಸ್ಥೆಯ ನಿರ್ದೇಶಕ ಲಕ್ಷ್ಮಣ , ಅಂಬೇಡ್ಕರ್ ಯುವಕ ಸೇನೆಯ ಶಶಿ , ರಾಜು, ಮೋಹನ, ನಾಗಣ್ಣ ವ್ಯವಸಾಯ ಸಹಕಾರ ಸಂಘದ ನಿರ್ದೇಶಕ ಹನುಮಂತಯ್ಯ , ಕಲಾವಿದ ಬೇವೂರು ರಾಮಯ್ಯ, ಬೈಂಡಿಂಗ್ ಬೋರಯ್ಯ , ಮಧು , ಅರ್ಜುನ, ಪುಟ್ಟಲಿಂಗಯ್ಯ, ಸಂಜೀವಯ್ಯ, ಮತ್ತಿತ್ತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *