ನಾಳೆ (ಏಪ್ರಿಲ್ 21) ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ

ರಾಮನಗರ : ಜಿಲ್ಲಾಡಳಿತ, ಹಾಗೂ ಕರ್ನಾಟಕ ರಾಜ್ಯ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘ, ರಾಮನಗರ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಪ್ರಯುಕ್ತ 2021-22ನೇ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭವನ್ನು ಏಪ್ರಿಲ್ 21 ರಂದು ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಉನ್ನತ ಶಿಕ್ಷಣ ಮಾಹಿತಿ ತಂತ್ರಜ್ಷಾನ, ಜೈವಿಕ ತಂತ್ರಜ್ಷಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಉದ್ಘಾಟಿಸಲಿದ್ದು, ರಾಮನಗರ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕ ಅನಿತಾ ಕುಮಾರಸ್ವಾಮಿ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಮಾನ್ಯ ಸಂಸದ ಡಿ.ಕೆ ಸುರೇಶ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಮಾನ್ಯ ಸಂಸದ ಬಚ್ಚೇಗೌಡ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಶಾಸಕ ಹೆಚ್.ಡಿ ಕುಮಾರಸ್ವಾಮಿ, ಕನಕಪುರ ವಿಧಾನಸಭಾ ಕ್ಷೇತ್ರ ಶಾಸಕ ಡಿ.ಕೆ ಶಿವಕುಮಾರ್ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಒಡಿ ಸೌಲಭ್ಯ :

ರಾಮನಗರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ ಅಂಗವಾಗಿ ರಾಮನಗರ ಜಿಲ್ಲಾ ಸರಕಾರಿ ನೌಕರರಿಗೆ ಒಂದು ದಿನದ ಓಓಡಿ ಸೌಲಭ್ಯವನ್ನು ನೀಡಲಾಗಿದೆ. ನೌಕರರು  ಕಾರ್ಯಕ್ರಮದಲ್ಲಿ  ಭಾಗವಹಿಸಿ  ಭಾಗವಹಿಸಿದ ಬಗ್ಗೆ ಹಾಜರಾತಿ  ಪತ್ರವನ್ನು ಪಡೆದುಕೊಂಡು ಆಯಾ ಇಲಾಖೆಗಳ ಮುಖ್ಯಸ್ಥರುಗಳಿಗೆ ನೀಡುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ನನ್ನ ನೌಕರಿ ನನ್ನ ಹೆಮ್ಮ

Leave a Reply

Your email address will not be published. Required fields are marked *