ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ ಒತ್ತು ನೀಡಿ : ಬಿ.ಸಿ. ನಾಗೇಶ್
ರಾಮನಗರ : ಸಾರ್ವಜನಿಕ ಹಾಗೂ ಅನುದಾನಿತ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಲ್ಲಿ ಅವರ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಲಿದೆ. ಹಾಗೆಯೇ, ಗುಣಮಟ್ಟದ ಬೋಧನೆಯಿಂದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸ್ಪರ್ಧೆ ಮನೋಭಾವ ಉಂಟಾಗಲು ಸಹಾಯಕವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಮನಗರ ಸಾರ್ವಜನಿಕ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಮಂಡ್ಯ ಸಾರ್ವಜನಿಕ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ಜಿಲ್ಹಾ ಪಂಚಾಯತ್ ಸಭಾಂಗಣದಲ್ಲಿ
ಬುಧವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶ ಅಭಿವೃದ್ಧಿ ಪಥದಲ್ಲಿ ಸಾಗಲು ಶಿಕ್ಷಣ ಇಲಾಖೆ ಪ್ರಮುಖ ಪಾತ್ರವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯ ಕಲ್ಪಿಸುವುದಕ್ಕೆ ಒತ್ತು ನೀಡಬೇಕು. ಇದರಿಂದ ವಿದ್ಯಾರ್ಥಿಗಳ ಆಲೋಚನೆಗೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕು. ನಿಟ್ಟಿನಲ್ಲಿ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚನೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗುತ್ತಿರುವುದರ ಬಗ್ಗೆ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಅಧಿಕಾರಿಗಳು ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಗೈರು ಹಾಜರಾತಿ ಕುರಿತು ವಿಚಾರಿಸಬೇಕು. ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಉತ್ತಮವಾದ ಬೋಧನಾ ವ್ಯವಸ್ಥೆ ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಅಧಿಕಾರಿಗಳು ನಿಯಮಿತವಾಗಿ ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಕೆಂದು ಬಿ.ಸಿ ನಾಗೇಶ್ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಮುಖ್ಯ ಕಾರ್ಯನಿರ್ವಹಕಧಿಕಾರಿ ಇಕ್ರಮ್ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರ ಆಪ್ತ ಕಾರ್ಯದರ್ಶಿ ಎ ಆರ್ ರವಿ, ರಾಮನಗರ ಹಾಗೂ ಮಂಡ್ಯ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳು, ಸಹಾಯಕ ನಿರ್ದೇಶಕರು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.