ಇಂದಿನಿಂದ (ಶುಕ್ರವಾರ) ದ್ವಿತೀಯ ಪಿಯು ಪರೀಕ್ಷೆ ಆರಂಭ
ರಾಮನಗರ : ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಪಿಯು ಪರೀಕ್ಷೆಗೆ ಸಕಲ ಸಿದ್ದತೆ ಮಾಡಿಕೊಂಡಿದೆ.
ಹಿಜಾಬ್ ಸೇರಿದಂತೆ ಧಾರ್ಮಿಕ ವಸ್ತುಗಳಿಗೆ ಪರೀಕ್ಷಾ ಕೊಠಡಿಗೆ ಅವಕಾಶವಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ಹಿಜಾಬ್ ಧರಿಸುವಂತಿಲ್ಲ ಎಂದು ಈಗಾಗಲೆ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಈ ಭಾರಿ ಒಟ್ಟು 9912 ಪರೀಕ್ಷಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಲ್ಲಿ 3905 ಮಂದಿ ವಿದ್ಯಾರ್ಥಿಗಳು 4578 ವಿದ್ಯಾರ್ಥಿನಿಯರು ಇದ್ದು, ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 1091 ಇದೆ.
ಪರೀಕ್ಷಾ ಕೇಂದ್ರಸಲ್ಲಿ ಯಾವುದೇ ಗೊಂದಲಕ್ಕೂ ಅವಕಾಶವಾಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸೂಸುತ್ರವಾಗಿ ಪಿಯು ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಒಟ್ಟು 13 ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ರಾಮನಗರ 04, ಚನ್ನಪಟ್ಟಣ 03, ಕನಕಪುರ 02, ಮಾಗಡಿ 02, ಬಿಡದಿಯಲ್ಲಿ 01 ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ.
ಮೊದಲ ಬಾರಿಗೆ ಹಾರೋಹಳ್ಳಿಯಲ್ಲಿ ಕೂಡ 01 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರದ ಬಳಿಯೂ ಪೊಲೀಸರ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಪೊಲೀಸ್ ಭದ್ರತೆ ಕೈಗೊಳ್ಳಲಗಿದೆ.
ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ, ಆಯಾ ಕಾಲೇಜಿನ ಸಮವಸ್ತ್ರ ಧರಿಸುವಂತೆ ಈಗಾಗಲೆ ಸೂಚನೆ ನೀಡಲಾಗಿದ್ದು, ಪರೀಕ್ಷಾ ಕೇಂದ್ರ ಬಳಿಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಈ ನಡುವೆ ವಿದ್ಯಾರ್ಥಿಗಳು ದೇವರ ಮೊರೆ ಹೋಗಿದ್ದು ನಗರದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪರೀಕ್ಷೆಗೂ ಮುನ್ನಾ ಆಂಜನೇಯ ದೇವರ ಪೂಜೆ, ಪ್ರಾರ್ಥನೆ ಸಲ್ಲಿಸಿದರು.