ಮಗಳ ಜನುಮ ದಿನಾಚರಣೆ ಅಂಗವಾಗಿ ಇರುಳಿಗ ಬುಡಕಟ್ಟು ಸಮುದಾಯದ ಮಕ್ಕಳಿಗೆ ವಾಟರ್ ಬಾಟಲ್ ವಿತರಣೆ

ರಾಮನಗರ : ಸಂಶೋಧನಾ ವಿದ್ಯಾರ್ಥಿ ಎಸ್. ರುದ್ರೇಶ್ವರ ಹಾಗೂ ಶಿಕ್ಷಕಿ ಡಿ.ಆರ್. ನೀಲಾಂಬಿಕಾ ಅವರು ತಮ್ಮ ಮಗಳಾದ ಆರ್. ಯಶಿಕಾ ಜನ್ಮ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಕೂಟಗಲ್ ಬಳಿಯ ‘ರತ್ನಗಿರಿ ಹಾಡಿ’ಯಲ್ಲಿ ಇರುಳಿಗ ಬುಡಕಟ್ಟು ಸಮುದಾಯದ ಮಕ್ಕಳಿಗೆ ಕುಡಿಯುವ ನೀರಿನ ಬಾಟಲ್ ಗಳ (ವಾಟರ್ ಬಾಟಲ್) ವಿತರಣೆ ಹಾಗೂ ನೀರಿನ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಏಪ್ರಿಲ್ 26ರ ಮಂಗಳವಾರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಕೆ. ಸತೀಶ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಬಿ. ಚೇತನ್ ಕುಮಾರ್, ಕೂಟಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲ್ಲೂರಮ್ಮ, ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯ ಕಾರ್ಯದರ್ಶಿ ಅಲ್ತಾಪ್ ಅಹಮದ್, ಇರುಳಿಗ ಅರಣ್ಯವಾಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಇರುಳಿಗ, ಪ್ರಧಾನ ಕಾರ್ಯದರ್ಶಿ ಜೆ.ಎಲ್. ಶಿವರಾಜ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಆರ್. ಯಶಿಕಾ

Leave a Reply

Your email address will not be published. Required fields are marked *