ನಾಳೆ (ಏ 29) ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಪದೋನ್ನತಿ ಸ್ಥಳ ಆಯ್ಕೆ ಪ್ರಕ್ರಿಯೆ
ರಾಮನಗರ : ಏಪ್ರಿಲ್ 29ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಪದೋನ್ನತಿ ಸ್ಥಳ ಆಯ್ಕೆ ಪ್ರಕ್ರಿಯೆಯು ರಾಮನಗರದ ಹೋಲಿ ಕ್ರೆಸೆಂಟ್ ಆಂಗ್ಲ ಶಾಲೆಯಲ್ಲಿ ನಡೆಯಲಿದೆ. ಸಮಯಕ್ಕೆ ಸರಿಯಾಗಿ ಅಪೇಕ್ಷಿತ ಶಿಕ್ಷಕರು ಸ್ಥಳದಲ್ಲಿ ಹಾಜರಿರಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ರಮೇಶ್ ಮನವಿ ಮಾಡಿದ್ದಾರೆ.