ಮೇ 3ರಂದು ಬಸವ ಜಯಂತಿ

ರಾಮನಗರ: ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಮೇ 3ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ‘ಕಳೆದ ಎರಡು ವರ್ಷ ಕೋವಿಡ್ ಕಾರಣಕ್ಕೆ ಸರಳವಾಗಿ ಬಸವ ಜಯಂತಿಯನ್ನು ಆಚರಿಸಲಾಗಿತ್ತು, ಈ ಬಾರಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಿಯೇ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.

ಬಸವಣ್ಣನವರ ವಚನಗಳ ಮಹತ್ವ ಯುವ ಸಮುದಾಯ ಸೇರಿದಂತೆ ಮುಂದಿನ ಪೀಳಿಗೆಗೆ ತಲುಪಬೇಕು. ವಚನಗಳ ಮಹತ್ವವನ್ನು ತಿಳಿಸಿಕೊಡುವ ಕೆಲಸ ಜಯಂತಿಯಂದು ಆಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ರಾಮನಗರ ತಹಶೀಲ್ದಾರ್ ಎಂ. ವಿಜಯ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಹರೀಶ್ ಕುಮಾರ್ ಎನ್. ಮತ್ತು ವೀರಶೈವ ಸಮಾಜದ ಮುಖಂಡರು ಇದ್ದರು.

Leave a Reply

Your email address will not be published. Required fields are marked *