ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ : ನಾಳೆ (ಮೇ 24) ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್ ಜಾರಿ
ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಶೇಷ ಕೋರ್ಟ್ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಸಮನ್ಸ್ ಜಾರಿ ಮಾಡಿದ್ದು, ಮೇ 24 ರಂದು ನಡೆಯುವ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.
ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಯನ್ನು ಹಮ್ಮಿಕೊಂಡಿತ್ತು. ಕೋವಿಡ್ ಸಂದರ್ಭದಲ್ಲೂ ಪಾದಯಾತ್ರೆ ನಡೆಸಿದ ಕಾರಣಕ್ಕಾಗಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಪಾದಯಾತ್ರೆಯಲ್ಲಿ ಭಾಗಿಯಾದ ಹಲವರ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿದೆ. ಈ ಸಂಬಂಧ ಕೋರ್ಟ್ ಇಂದು ಸಿದ್ದರಾಮಯ್ಯ ಅವರಿಗೆ ಸಮನ್ಸ್ ನೀಡಿದೆ.