ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದು ಕೊಂಡಿರುವ ರೈತರಿಗೆ ಪರಿಹಾರ ನೀಡಲು ಅಧಿಕಾರಿಗಳ ಜೊತೆ ಚರ್ಚೆ : ಎ. ಮಂಜುನಾಥ್
ರಾಮನಗರ : ಪುರಸಭೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಭೂಮಿ ಕಳೆದು ಕೊಂಡಿರುವ ರೈತರಿಗೆ ಕಾನೂನು ಪ್ರಕಾರ ಇನ್ನೆರಡು ದಿನಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳ ಜೊತೆ ಚಚೆ ನಡೆಸಿರುವುದಾಗಿ ಶಾಸಕ ಎ.ಮಂಜುನಾಥ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳು, ಎನ್ ಎಚ್ ಅಧಿಕಾರಿಗಳ ಜೊತೆ ನಡೆದ ಸಭೆಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರೈತರಿಗೆ ಅನ್ಯಾಯ ವಾಗಿದೆ ಎಂದು ಪ್ರತಿಭಟನೆ ನಡೆಸಿರುವುದು ನ್ಯಾಯ ಕೇಳಿದ್ದಾರೆ ಅವರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದೇನೆ. ಜಿಲ್ಲಾಧಿಕಾರಿಗಳು, ಎನ್ ಎಚ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಸಭೆ ಫಲಪ್ರದವಾಗಿದೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ಶರತ್, ಗೋವಿಂದಯ್ಯ, ಕುಮಾರ್, ಕೆಂಪಣ್ಣ, ರವಿಕುಮಾರ್ ಮತ್ತಿತರರು ಇದ್ದರು.

ವರದಿ : ಪಾದ್ರಳ್ಳಿ ರಾಜು ಮೊ : 6360905062