ರಾಮನಗರ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ
ರಾಮನಗರ: ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ರವರಿಗೆˌ ಇ.ಡಿ.ಇಲಾಖೆಯು ಉದ್ದೇಶ ಪೂರ್ವಕವಾಗಿ ನೋಟಿಸ್ ನೀಡಿ ದೌರ್ಜನ್ಯವನ್ನು ಖಂಡಿಸಿ ಶುಕ್ರವಾರ ಸಂಜೆ ರಾಮನಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಫಂಜಿನ ಮೆರವಣಿಗೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಕಛೇರಿ ಮುಂಭಾಗದಿಂದ ಹೊರಟ ಪಂಜಿನ ಮೆರವಣಿಗೆ ಐಜೂರು ವೃತ್ತದವರೆಗೆ ಸಾಗಿತು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ ರಾಜಕೀಯ ಪ್ರೇರಿತವಾಗಿ ಕೇಂದ್ರ ಬಿಜೆಪಿ ಸರ್ಕಾರ ರಾಹುಲ್ ಗಾಂಧಿ ಅವರನ್ನು ಇಡಿ ಮೂಲಕ ವಿಚಾರಣೆ ನಡೆಸುತ್ತಿದೆ. ಅದನ್ನು ಶಾಂತಿಯುತವಾಗಿ ಖಂಡಿಸಿದ ನಮ್ಮ ನೆಚ್ಚಿನ ಸಂಸದ ಡಿ.ಕೆ.ಸುರೇಶ್ ಹಾಗೂ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರುಗಳನ್ನು ದೆಹಲಿ ಪೋಲೀಸ್ ಅಧಿಕಾರಿಗಳು ಮನ ಬಂದಂತೆ ನಡೆಸಿಕೊಂಡ ರೀತಿ ಇಡೀ ಸಮಾಜ ತಲೆತಗ್ಗಿಸುವಂತದ್ದು,ಇವೆಲ್ಲವನ್ನು ಸೂಕ್ಷ್ಮವಾಗಿ ಗಮನಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಆದೇಶದಂತೆ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಇಡಿ ಅಧಿಕಾರಗಳ ಹಾಗೂ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಹಾಗೂ ಪೋಲಿಸರ ಕ್ರಮವನ್ನು ಖಂಡಿಸಿ ಪಂಜಿನ ಮೆರವಣಿಗೆ ಹಮ್ಮಿಕೋಳ್ಳಲಾಗಿದೆ ಎಂದು ಹೇಳಿದರು.

ದೇಶದಾದ್ಯಂತ ಬಿಜೆಪಿ ವಿರುದ್ದ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಇಡಿ, ಪೋಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ನೋಟೀಸ್ ನೀಡುವ ಕೆಲಸ ಮಾಡುತ್ತಿದೆ. ಜನಸಾಮಾನ್ಯರು ಜೀವನ ಮಾಡದಂತಹ ಪರಿಸ್ಥಿತಿಗೆ ಬಿಜೆಪಿ ಕಾರಣವಾಗಿದೆ. ಧರ್ಮಗಳನ್ನು ಹೊಡೆಯುವ ಕೆಲಸ ಮಾಡುತ್ತಿದೆ ಎಂದರು.
ಶಾಸಕ ಕೆ.ರಾಜು ಮಾತನಾಡಿ ಸುಳ್ಳು ಮೊಕದೊಮ್ಮೆ ಹೂಡಿ ರಾಜಕೀಯವಾಗಿ ಕುಗ್ಗಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಬಿಜೆಪಿ ಸರ್ಕಾರದ ದೋರಣೆಯನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ರಮೇಶ್, ಸಿಎನ್ ಆರ್ ವೆಂಕಟೇಶ್, ರಾಜು, ಮುತ್ತುರಾಜು ಗೋಪಾಲ್, ಚಿಕ್ಕೇಗೌಡ, ಅನಿಲ್, ಮತ್ತಿತರರು ಇದ್ದರು. ಮೆರವಣಿಗೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಹೆಚ್.ಎ.ಇಕ್ಬಾಲ್ ಹುಸೇನ್,ಮಾಜಿ ಶಾಸಕ ಕೆ.ರಾಜು, ಎಂಇಐ ಮಾಜಿ ಅಧ್ಯಕ್ಷ ಕೆ.ಶೇಷಾದ್ರಿ, ನಗರಸಭೆ ಅಧ್ಯಕ್ಷೆ ಬಿ.ಸಿ.ಪಾರ್ವತಮ್ಮ,ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ನಗರ ಬ್ಲಾಕ್ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಗ್ರಾಮಾಂತರ ಬ್ಲಾಕ್ ಅದ್ಯಕ್ಷ ವಿ.ಹೆಚ್.ರಾಜು, ಹಾರೋಹಳ್ಳಿ-ಮರಳವಾಡಿ ಬ್ಲಾಕ್ ಅದ್ಯಕ್ಷ ಅಶೋಕ್, ಚುನಾಯಿತ ಪ್ರತಿನಿಧಿಗಳು, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ಮುಖಂಡರುಗಳು ಭಾಗವಹಿಸಿ ಪಂಜಿನ ಮೆರವಣಿಗೆಯನ್ನು ಯಶಸ್ವಿಗೊಳಿಸಿದರು.

ವರದಿ : ಪಾದ್ರಳ್ಳಿ ರಾಜು, ಮೊ : 6360905062
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/HK9U7zQD11W79PK8sGwVCS
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :
WhatsApp : 9880439669
Mail : rudresh.444@gmail.com