ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಕಾರಣ ಎಂಬಂತೆ ಕಾಂಗ್ರೆಸ್ ದೇಶದೆಲ್ಲೆಡೆ ಬಿಂಬಿಸುತ್ತಿರುವುದು ಖಂಡನೀಯ : ಅಶ್ವತ್ ನಾರಾಯಣ್

ರಾಮನಗರ : ರಾಹುಲ್ ಗಾಂಧಿ ಅವರಿಗೆ ಇಡಿ ನೋಟಿಸ್ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಕಾರಣ ಎಂಬಂತೆ ಕಾಂಗ್ರೆಸ್ ದೇಶದೆಲ್ಲೆಡೆ ಬಿಂಬಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಹೇಳಿದರು.
ನಗರದ ಆರ್ ವಿಸಿಎಸ್ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಸರ್ಕಾರವನ್ನು ಒಪ್ಪಿಕೂಂಡಿದ್ದಾರೆ. ಆದರೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ವಿಚಾರಣೆಗೆ‌ ಇಡಿ ನೋಟೀಸ್ ನೀಡಿ ವಿಚಾರಣೆಗೆ ಕರೆದಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡರು ಇಡಿ ವಿಚಾರಣೆಗೆ ಸಹಕರಿಸುವ ಬದಲು ಗೂಂಡಾ ವರ್ತನೆಯಂತೆ ನಡೆದುಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ಧಾರೆ.
ಸುಬ್ರಮಣ್ಯಸ್ವಾಮಿ ಅವರು ನೀಡಿದ ಖಾಸಗಿ‌ ದೂರಿನ ಮೇರೆಗೆ ಇಡಿ ತನಿಖೆ ನಡೆಸುತ್ತಿದೆ.
ಈಗಾಗಲೇ ಹಲವರಿಂದ ಮಾಹಿತಿ ಸಂಹ್ರಹಿಸುವ ಕೆಲಸಕ್ಕೆ ಮುಂದಾಗಿದೆ. ಈ‌ ಹಿಂದೆಯೂ ಚಿದಂಬರಂ,ಡಿ.ಕೆ.ಶಿವಕುಮಾರ್ ಅವರು ಸಹ ಪ್ರತ್ಯೇಕ‌ ಪ್ರಕರಣಗಳಲ್ಲಿ ತನಿಖೆಗೆ ಹೋಗಿ ಬಂದಿದ್ದಾರೆ. ಆಗಾಗಿ ಭ್ರಷ್ಟಾಚಾರ ನಡೆಸಿರುವುದನ್ನು ಬಯಲಿಗೆಳೆಯುವುದು ತಪ್ಪೆ ಎಂದು‌ ಪ್ರಶ್ನಿಸಿದ ಅವರು ಕೇವಲ ಕಾಂಗ್ರೆಸ್ ನವರ ಮೇಲೆ ಮಾತ್ರ ಭ್ರಷ್ಟಾಚಾರದಲ್ಲಿ ತನಿಖೆ ಮಾಡುತ್ತಿದ್ಧಾರೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲವೇ ಎಂಬ ಮಾಧ್ಯಮದವರ ಪ್ರಶ್ಬೆಗೆ ಅವರು ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರು ವಿಚಾರಣೆ ನಡೆಸಲಿದೆ ಎಂದು ಆರಿಕೆ ಉತ್ತರ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರದೇವರು, ನಗರ ಘಟದ ಅಧ್ಯಕ್ಷ ಶಿವಾನಂದ, ಗ್ರಾಮಾಂತರ ಘಟಕದ ಅಧ್ಯಕ್ಷ ಗೋಪಾಲ್, ಜಿಲ್ಲಾ ಮಾಧ್ಯಮ ವಕ್ತಾರ ಕೇಶವ ಮೂರ್ತಿ, ಮಾಧ್ಯಮ ಸಂಚಾಲಕ ಚಂದ್ರಶೇಖರ ರೆಡ್ಡಿ, ನಗರಸಭಾ ಮಾಜಿ ಸದಸ್ಯ ನಾಗೇಶ್, ನಗರ ಘಟಕದ ಕಾರ್ಯದರ್ಶಿ ದೇವರಾಜು ಇದ್ದರು.

ಪಾದ್ರಳ್ಳಿ ರಾಜು

ವರದಿ : ಪಾದ್ರಳ್ಳಿ ರಾಜು, ಮೊ : 6360905062

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :

WhatsApp : 9880439669

Mail : rudresh.444@gmail.com

Leave a Reply

Your email address will not be published. Required fields are marked *