ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಕನಕಪುರ ರೂರಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆರ್.ದರ್ಶನ್ ಮತ್ತು ಎಂ.ಪ್ರೀತಮ್ ಆಯ್ಕೆ
ಕನಕಪುರ : ಆಂಧ್ರಪ್ರದೇಶದ ತೆನಾಲಿಯಲ್ಲಿ ಥ್ರೋಬಾಲ್ ಫೆಡರೇಷನ್ ಆಫ್ ಇಂಡಿಯಾದ ಸಹಯೋಗದಲ್ಲಿ ಜೂನ್ 17 ರಿಂದ 19 ರವರೆಗೆ ನಡೆಯುತ್ತಿರುವ ರಾಷ್ಟ್ರಮಟ್ಟದ ಜೂನಿಯರ್ ಥ್ರೋಬಾಲ್ ಕ್ರೀಡಾಕೂಟಕ್ಕೆ ಇಲ್ಲಿನ ರೂರಲ್ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ಆರ್.ದರ್ಶನ್, ಕಲಾ ವಿಭಾಗದ ಎಂ.ಪ್ರೀತಮ್ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.
ವಿದ್ಯಾರ್ಥಿಗಳು ಕ್ರೀಡೆಯಲ್ಲಿ ವಿಜೇತರಾಗಿ ತಾಲ್ಲೂಕಿಗೆ ಮತ್ತು ಕಾಲೇಜಿಗೆ ಕೀರ್ತಿ ತರಲಿ ಎಂದು ಆರ್‌ಇಎಸ್ ಸಂಸ್ಥೆ ಅಧ್ಯಕ್ಷ ಕೆ.ಬಿ.ನಾಗರಾಜು, ಉಪಾಧ್ಯಕ್ಷ ಎಂ.ಎಲ್.ಶಿವಕುಮಾರ್, ಕಾರ್ಯದರ್ಶಿ ಸಿ.ರಮೇಶ್ ಹಾಗೂ ನಿರ್ದೇಶಕರು ಮತ್ತು ಕಾಲೇಜಿನ ಪ್ರಾಂಶುಪಾಲ ಗದಿಗೆಪ್ಪ ಹಿತ್ತಲಮನಿ, ದೈಹಿಕ ಶಿಕ್ಷಣ ಉಪನ್ಯಾಸಕ ನವೀನ್‌ಕುಮಾರ್, ಕ್ರೀಡಾ ಸಮಿತಿ ಸದಸ್ಯರು ಹಾಗೂ ತಾಲ್ಲೂಕಿನ ಜನತೆ ಶುಭಕೋರಿದ್ದಾರೆ.