ಜುಲೈ 2 ರಂದು ಅಚ್ಚಲು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ

ರಾಮನಗರ : ತಾಲ್ಲೂಕಿನ ಕೈಲಾಂಚ ಹೋಬಳಿಯ ಅಚ್ಚಲು ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯು ಜುಲೈ 2 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಂಘದ ಕಚೇರಿಯಲ್ಲಿ ನಡೆಯಲಿದೆ.

ಆಸಕ್ತರು ಜೂನ್ 23ರ ಮಧ್ಯಾಹ್ನ 3 ಗಂಟೆ ಒಳಗೆ ನಾಮಪತ್ರ ಸಲ್ಲಿಸಬಹುದು. ಜೂನ್ 24 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಂದೇ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಜೂನ್ 25 ರಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಬಹುದು. ಮಧ್ಯಾಹ್ನ 3 ಗಂಟೆ ನಂತರ ಕಣದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದ್ದು ಚುನಾವಣೆ ಚಿಹ್ನೆ ಹಂಚಿಕೆ ಮಾಡಲಾಗುವುದು. ಜುಲೈ 2 ರಂದು ಸಂಘದ ಕಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ ಎಂದು ಸಂಘದ ಚುನಾವಣಾಧಿಕಾರಿಯಾಗಿ ನೇಮಕವಾಗಿರುವ ಕೆ.ಟಿ. ಉಮೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *