ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್
ರಾಮನಗರ : ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಅಗತ್ಯವಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಜವಬ್ದಾರಿ ಹಿರಿಯರಾದ ನಮ್ಮೆಲ್ಲರ ಕರ್ತವ್ಯ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ತಿಳಿಸಿದರು.

ಕನಕಪುರ ತಾಲ್ಲೂಕಿನ ಬಿ.ಸಿ.ಎಂ ಇಲಾಖೆಯ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳು ನಮ್ಮ ಜಿಲ್ಲೆಯ ಬಹುದೊಡ್ಡ ಆಸ್ತಿ ಮತ್ತು ಹೆಮ್ಮೆ. ಇಂತಹ ವಿದ್ಯಾರ್ಥಿಗಳನ್ನು ಬಾಲ್ಯದಲ್ಲೇ ಗುರುತಿಸಿ ಪ್ರೋತ್ಸಾಹ ನೀಡಿದರೆ ಅವರ ಉತ್ಸಾಹ ಹಿಮ್ಮಡಿ ಗೊಳ್ಳುವ ಮೂಲಕ ಇನ್ನೂ ಅಭೂತಪೂರ್ವ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತರುವಂತಹ ನಿಟ್ಟಿನಲ್ಲಿ ಶ್ರಮವಹಿಸಿ ಅಬ್ಯಾಸ ಮಾಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ 625ಕ್ಕೆ 625 ಅಂಕಗಳಿಸುವ ಮೂಲಕ ಸಾಧನೆ ಗೈದ ದೊಡ್ಡಮರಳವಾಡಿ ಮೊರಾರ್ಜಿ ವಸತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ವಿಕಾಸಗೌಡ ಅವರಿಗೆ 5 ಸಾವಿರ ನಗದು ಬಹುಮಾನವನ್ನು ಕೊಟ್ಟು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ರಾಜಣ್ಣ, ವಿಸ್ತರಣಾಧಿಕಾರಿ ಮೀನಾಕ್ಷಿ ಕಟ್ಟಿ, ಪ್ರಥಮ ದರ್ಜೆ ಸಹಾಯಕರಾದ ರುಕ್ಮಾಂಗದ ಹಾಗೂ ಸಿಬ್ಬಂಧಿ ವರ್ಗದವರು ಹಾಜರಿದ್ದರು.