ನಾಳೆ (ಜುಲೈ 1) ಯಿಂದ ಪೌರಕಾರ್ಮಿಕರ ಅನಿರ್ದಿಷ್ಟಾವಧಿ ಧರಣಿ : ಛಲಪತಿ

ರಾಮನಗರ : ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಜುಲೈ 1ರಿಂದ ಕುಡಿಯುವ ನೀರು, ಸ್ವಚ್ಛತೆ ಸ್ಥಗಿತಗೊಳಿಸಿ ರಾಜ್ಯದಾದ್ಯಂತ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರು ಹಾಗೂ ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ ಎಂದು ಹೊರಗುತ್ತಿಗೆ ಪೌರ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚಲಪತಿ ತಿಳಿಸಿದರು.

ರಾಮನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹೊರಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಜಿಲ್ಲೆಯ ಮಾಗಡಿ, ಬಿಡದಿ, ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಹಾರೋಹಳ್ಳಿ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರು ಸೇರಿದಂತೆ ವಿವಿಧ ನೌಕರರು ಜುಲೈ 1ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅನಿರ್ದಿಷ್ಟವಾಧಿ ಧರಣಿ ಆರಂಭಿಸಿದ್ದೇವೆ. ಈ ವೇಳೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗುವುದು. ಧರಣಿಯ ವೇಳೆ 600 ಕ್ಕೂ ಹೆಚ್ಚು ಮಂದಿ ಸೇರಲಿದ್ದೇವೆ ಎಂದು ಹೇಳಿದರು.

ಜು.1ರಿಂದ ರಾಜ್ಯದಾದ್ಯಂತ ಬಿಬಿಎಂಪಿ ಸೇರಿದಂತೆ 30 ಸಾವಿರ ಪೌರಕಾರ್ಮಿಕರು ಹಾಗೂ 10 ಸಾವಿರ ಹೊರಗುತ್ತಿಗೆ ನೌಕರರು ಧರಣಿ ನಡೆಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಪೌರ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಾದ ರಾಜು, ಗಣೇಶ್, ಚಿಕ್ಕ ನರಸಯ್ಯ, ರಾಜಶೇಖರ್, ಪುಟ್ಟಸ್ವಾಮಿ ಇದ್ದರು.

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :

WhatsApp : 9880439669

Mail : rudresh.444@gmail.com

Leave a Reply

Your email address will not be published. Required fields are marked *