ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷ್ ಬಾಬು

ರಾಮನಗರ : ನಗರದ ಹೋಲಿ ಕ್ರೆಸೆಂಟ್‍ ಆಂಗ್ಲ ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆಗೆ ಚುನಾವಣೆ ಹಾಗೂ ಪದಸ್ಥಾನ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.

ಚುನಾವಣೆಯಲ್ಲಿ ಭಾಗವಹಿಸುವಿಕೆ, ಮತದಾನದ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಸಂತೋಷ್‍ಬಾಬು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ “ಮಕ್ಕಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳು ಬಹಳ ಮುಖ್ಯ” ಎಂದು ತಿಳಿಸಿದರು.

ಶಾಲೆಯ ಅಧ್ಯಕ್ಷರಾದ ಡಾ. ಶಾಜಿಯಾ ಮಾತನಾಡಿ ಪ್ರತಿಯೊಂದು ಮಗುವೂ ಸಹ ನಾಯಕನೇ. ಅವರನ್ನು ಗುರುತಿಸಿ ಉತ್ತೇಜಿಸಬೇಕು ಎಂದು ತಿಳಿಸಿದರು.

ಶಾಲೆಯ ಕಾರ್ಯದರ್ಶಿಗಳಾದ ಅಲ್ತಾಫ್‍ ಅಹ್ಮದ್‍ ಮಾತನಾಡಿ ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಮುಖ್ಯವಾಹಿನಿಗೆ ತರುವುದು ನಮ್ಮ ಶಾಲೆಯ ಉದ್ದೇಶ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಮೂರ್ತಿ. ಎಸ್, ಆಡಳಿತಾಧಿಕಾರಿಗಳಾದ ಸ್ಟ್ಯಾನ್ಲಿ ಪಾಲ್, ಮುಖ್ಯೋಪಾಧ್ಯಾಯರಾದ ಲತಾಆನಂದ್, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :

https://chat.whatsapp.com/HK9U7zQD11W79PK8sGwVCS

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :

WhatsApp : 9880439669

Mail : rudresh.444@gmail.com

Leave a Reply

Your email address will not be published. Required fields are marked *