ಖಾಸಗಿ ಶಾಲೆಯಲ್ಲೂ ಬಿಸಿಯೂಟ
ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಹೂಕುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೊಪ್ಪ ಗ್ರಾಮದಲ್ಲಿರುವ ಆದರ್ಶ ವಿದ್ಯಾ ಮಂದಿರದಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ.
ಸುತ್ತಮುತ್ತಲ ಹಳ್ಳಿಗಳಿಂದ ಬರುವ ಮಕ್ಕಳಿಗೆ ಮಧ್ಯಾಹ್ನದ ಊಟಕ್ಕೆ ತೊಂದರೆ ಆಗುತ್ತಿತ್ತು. ಅದನ್ನು ಮನಗಂಡು ಮಧ್ಯಾಹ್ನ ಬಿಸಿಯೂಟ ಕೊಡುವ ಯೋಜನೆ ಜಾರಿಗೆ ತಂದಿದ್ದೇವೆ ಎಂದು ಆದರ್ಶ ವಿದ್ಯಾಸಂಸ್ಥೆಯ ಸಂಸ್ಥಾಪಕ ಎಚ್.ವಿ.ಗುಂಡಣ್ಣ ತಿಳಿಸಿದರು. ಶಾಲೆಯ ಆಡಳಿತಾಧಿಕಾರಿ ಎಚ್.ಚಂದ್ರು ಇತರರು ಇದ್ದರು.