ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಿ : ಡಾ.ಸಿ. ಶಿವಕುಮಾರಸ್ವಾಮಿ

ರಾಮನಗರ : ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂದು ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕ ಡಾ.ಸಿ. ಶಿವಕುಮಾರಸ್ವಾಮಿ ತಿಳಿಸಿದರು.
ನಗರದ ಬಸವೇಶ್ವರ ಪ್ರಾರ್ಥನ ಮಂದಿರದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಸಂದರ್ಭದಲ್ಲಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಗುರುತಿಸಿ ಸನ್ಮಾನಿಸಲಾಗುತ್ತಿದೆ. ಹಾಗೆಯೇ ಪರೀಕ್ಷೆಗಳಲ್ಲಿ ಹಲವು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರೂ ಅವರಿಗೆ ವಿದ್ಯಾಭ್ಯಾಸವನ್ನು ಮುಂದುವರೆಸುವ ಪರಿಸ್ಥಿತಿ ಇರುವುದಿಲ್ಲ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಪೆÇ್ರೀತ್ಸಾಹಿಸಬೇಕು ಎಂದರು.
ಎಲ್ಲರೂ ಪರಸ್ಪರ ಸಹಕಾರ ಮನೋಭಾವದಿಂದ ಕೈ ಜೋಡಿಸಿದಾಗ ಮಾತ್ರ ಸಮಾಜವನ್ನು ಮುಖ್ಯವಾಹಿನಿಗೆ ತರಬಹುದು. ಸ್ಥಿತಿವಂತರು ಕಷ್ಟದಲ್ಲಿರುವ ಕನಿಷ್ಠ ಐದು ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಭವಿಷ್ಯಕ್ಕೆ ನೆರವು ನೀಡಿದರೆ ಸಮಾಜದ ದಿಕ್ಕು ಬದಲಾಗುತ್ತದೆ ಎಂದು ತಿಳಿಸಿದರು.
ಸಮಾಜದಲ್ಲಿ ನಾಯಕತ್ವ, ಸಾಮರಸ್ಯ ಹಾಗೂ ಆರ್ಥಿಕತೆಯ ಕೊರತೆಯಿದೆ. ಈ ಎಲ್ಲಾ ಕೊರತೆಗಳನ್ನು ನೀಗಿಸಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದೃಢ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.
ರುದ್ರಮುನೇಶ್ವರ ಮಠದ ಡಾ. ಚಂದ್ರಶೇಖರ ಸ್ವಾಮೀಜಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ, ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು. ನಿರ್ಧಿಷ್ಟವಾದ ಗುರಿಯನ್ನು ಇಟ್ಟುಕೊಂಡು ಸಾಧನೆ ಮಾಡಬೇಕು. ಸಮಯವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು, ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ. ಪ್ರಕಾಶ್, ಕಾರ್ಯದರ್ಶಿ ವಿ. ವೀರೇಶಮೂರ್ತಿ, ಖಜಾಂಚಿ ಮಲ್ಲಿಕಾರ್ಜುನ್, ಜಿಲ್ಲಾ ಉಪಾಧ್ಯಕ್ಷ ಸಿ.ವಿ. ಜಯಣ್ಣ, ಸಂಚಾಲಕ ನಟರಾಜು, ಜಿಲ್ಲಾ ಕಾರ್ಯದರ್ಶಿ ಜಿ.ಎಸ್. ಶಿವರುದ್ರಯ್ಯ, ಸಲಹೆಗಾರ ಶಿವಸ್ವಾಮಿ, ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗುಬ್ಬಿ ತಾಲ್ಲೂಕು ಘಟಕದ ಅಧ್ಯಕ್ಷ ದಯಾನಂದ ಸರಸ್ವತಿ ಇದ್ದರು. ಮಂಜುಳಾ ಪ್ರಾರ್ಥಿಸಿದರು.

Leave a Reply

Your email address will not be published. Required fields are marked *