“ಕರ್ನಾಟಕ ಛಾಯಾರತ್ನ” ಪ್ರಶಸ್ತಿಗೆ ಭಾಜನರಾದ ಖ್ಯಾತ ಛಾಯಾಗ್ರಾಹಕ ಟಿ. ರಮೇಶ್
ರಾಮನಗರ : ನಗರದ ಅಮೃತ್ ಡಿಜಿಟಲ್ ಸ್ಟುಡಿಯೋ ಮಾಲೀಕ, ಪ್ರಖ್ಯಾತ ಛಾಯಾಗ್ರಾಹಕ ಟಿ.ರಮೇಶ್ ಅವರು ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಅವರು ಜಂಟಿಯಾಗಿ ಕೊಡ ಮಾಡುವ ರಾಜ್ಯಮಟ್ಟದ “ಕರ್ನಾಟಕ ಛಾಯಾರತ್ನ” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ “ತ್ರಿಪುರ ವಾಸಿನಿ”ಯಲ್ಲಿ ಕರ್ನಾಟಕ ವಿಡಿಯೋ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೇಟ್ ಲಿಮಿಟೆಡ್ ಅವರು ಶುಕ್ರವಾರ ಆಯೋಜಿಸಿದ್ದ ಅಂತರಾಷ್ಟ್ರೀಯ ಮಟ್ಟದ ಪೋಟೋ ಟುಡೇ ವಸ್ತು ಪ್ರದರ್ಶನ”ದಲ್ಲಿ “ಕರ್ನಾಟಕ ಛಾಯಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದಲ್ಲಿ ರಾಮನಗರದ ಪ್ರಖ್ಯಾತ ಛಾಯಾಗ್ರಾಹಕ ಟಿ.ರಮೇಶ್ ಅವರು ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ “ಕರ್ನಾಟಕ ಛಾಯಾರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/HK9U7zQD11W79PK8sGwVCS
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :
WhatsApp : 9880439669
Mail : rudresh.444@gmail.com