ನೀವು ಅಧಿಕಾರದಲ್ಲಿರೋಕೆ ನಾಲಾಯಕ್ : ಪ್ರಮೋದ್ ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿಯ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಇದೀಗ ರಾಜ್ಯದಲ್ಲಿ ಕಿಚ್ಚಿಗೆ ಕಾರಣವಾಗಿದೆ. ಹಿಂದೂ ಕಾರ್ಯಕರ್ತನ ಹತ್ಯೆಯಾಗಿರುವುದಕ್ಕೆ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೀವು ಅಧಿಕಾರದಲ್ಲಿ ಇರೋಕೆ ನಾಲಾಯಕ್. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಲಿ. ಪ್ರತಿಭಟನೆ ಮಾಡುವವರ ಮೇಲೆ ಯಾಕೆ ಲಾಠಿ ಬೀಸಿದ್ರು ಎಂದು ಬಿಜೆಪಿ ನಾಯಕರ ಮೇಲೆ ಮುತಾಲಿಕ್ ಕೆಂಡಾಮಂಡಲವಾಗಿದ್ದಾರೆ.