ಡಿ.ಕೆ ಶಿವಕುಮಾರ್ ಬಿಗ್ ರಿಲೀಫ್

ಬೆಂಗಳೂರು : ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಸಿಕ್ಕ ಎಂಟೂವರೆ ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಶಿವಕುಮಾರ್ ಸೇರಿದಂತೆ ಅವರ ಆಪ್ತರಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರ ಮೇಲಿತ್ತು.

ಇದೀಗ ಎಲ್ಲರಿಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್​ ವಿಧಿಸಿದೆ. ಒಂದು ಲಕ್ಷ ರೂಪಾಯಿಯ ಶ್ಯೂರಿಟಿ ನೀಡುವಂತೆ ಕೋರ್ಟ್​ ಹೇಳಿದೆ. ಜತೆಗೆ ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ವಿಕಾಸ್ ಧುಲ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಕಳೆದ ಶನಿವಾರ ಈ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದನ್ನು ವಿರೋಧಿಸಿದ್ದ ಆರೋಪಿಗಳ ಪರ ವಕೀಲರು, ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇ.ಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಆರೋಪಿಗಳನ್ನು ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು. ಈ ವಾದವನ್ನು ಕೋರ್ಟ್​ ಮಾನ್ಯ ಮಾಡಿದೆ.

ಏನಿದು ವಿವಾದ?
2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಎಂಟೂವರೆ ಕೋಟಿ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಹಾಗೂ ಇತರರ ವಿರುದ್ಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಡಿಕೆಶಿ ಅವರು 800 ಕಡೆ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಲ್ಲಿ 200 ಕೋಟಿ ಠೇವಣಿ ಇದೆ. 20ಕ್ಕೂ ಹೆಚ್ಚು ಬ್ಯಾಂಕ್​ಗಳಲ್ಲಿ 317ಕ್ಕೂ ಹೆಚ್ಚು ಅಕೌಂಟ್​ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಮಗಳ ಹೆಸರಲ್ಲಿ 108 ಕೋಟಿ ಅಕ್ರಮ ವ್ಯವಹಾರ ಮಾಡಿದ್ದಾರೆ. ಪುತ್ರಿ ಹೆಸರಲ್ಲಿ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ಮತ್ತು ಹಣದ ಮೂಲವನ್ನ ತಿಳಿಸಿಲ್ಲ. ದೆಹಲಿಯಲ್ಲಿ ಸಿಕ್ಕಂತಹ 8.5 ಕೋಟಿ ಹಣಕ್ಕೂ ಲೆಕ್ಕ ಕೊಟ್ಟಿಲ್ಲ. ಎಂಬ ಆರೋಪ ಡಿಕೆಶಿ ಮೇಲೆ ಮಾಡಲಾಗಿದೆ.

Leave a Reply

Your email address will not be published. Required fields are marked *