ಯಾರು ಯಾರ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ ಮುಂದೆ ನೋಡೋಣ : ಎಚ್.ಡಿ. ಕುಮಾರಸ್ವಾಮಿ
ರಾಮನಗರ : ನಾನು ಕೈ ಎತ್ತಿಸಿಕೊಂಡು ಬೆನ್ನಿಗೆ ಚೂರಿ ಹಾಕಿಸಿಕೊಂಡಾಗಿದೆ. ಈಗ ಇಬ್ಬರು ಕೈ ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕುತ್ತಾರೆ ಅಂತ ಮುಂದೆ ನೋಡೋಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.
ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮದಿನಾಚರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಯಾಗಿ ಕೈಎತ್ತಿ ಒಗ್ಗಟ್ಟು ಪ್ರದರ್ಶಿಸಿದ ಕುರಿತು ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಾನೂ ಹೀಗೆ ಕೈ ಎತ್ತಿದ್ದೆ. ಕೈ ಎತ್ತುವುದು, ಇಳಿಸುವುದು ಸಂದರ್ಭಕ್ಕೆ ತಕ್ಕಂತೆ ನಡೆಯುತ್ತವೆ ಎಂದು ತಿಳಿಸಿದರು.