ಜನತಾ ಮೆಸ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಬಾದುಶಾ ವಿತರಣೆ
ರಾಮನಗರ : ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ರಾಮನಗರದ ಜನತಾ ಮೆಸ್ ವತಿಯಿಂದ ರಾಮನಗರ ವ್ಯಾಪ್ತಿಯ ಅಂಗನವಾಡಿ ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಾದುಶಾ ಸಿಹಿಯನ್ನು ವಿತರಣೆ ಮಾಡಲಾಯಿತು. ಆರು ಸಾವಿರಕ್ಕೂ ಹೆಚ್ಚು ಬಾದುಶಾಗಳನ್ನು ವಿತರಿಸಲಾಯಿತು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬಾದುಶಾ ಸಿಹಿಯನ್ನು ವಿತರಿಸಿದ ಜನತಾ ಮೆಸ್ ಮಾಲೀಕರಿಗೆ ಶಿಕ್ಷಕ ವೃಂದದವರು ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಜನತಾ ಮೆಸ್ ಮಾಲೀಕರಾದ ಮಮತಾನಾಗೇಶ್ ಮಾತನಾಡಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿಯನ್ನು ವಿತರಣೆ ಮಾಡುತ್ತಿದ್ದೇವೆ. ಎಲ್ಲರೂ ಸಡಗರದಿಂದ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಬೇಕು ಎಂದು ತಿಳಿಸಿದರು.