ರಾಮನಗರ ಜಿಲ್ಲೆಯಲ್ಲಿ ‘ಇಂಡಿಗೋ’ ಕಾರ್ಯಯೋಜನೆಗೆ ಚಾಲನೆ
ರಾಮನರ : ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆ, ಮೆಡಿಕಲ್ ರಿಸರ್ಚ್ ಕೌನ್ಸಿಲ್ ಯು.ಕೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಹಯೋಗದಲ್ಲಿ ‘ಇಂಡಿಗೋ’ ಎಂಬ ಯೋಜನೆಯನ್ನು ರಾಮನಗರ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ಮಾನಸಿಕ ಆರೋಗ್ಯ ಮತ್ತು ಮಾನಸಿಕ ಖಾಯಿಲೆಗಳ ಬಗ್ಗೆ ಇರುವ ಕೀಳರಿಮೆ ಮತ್ತು ತಾರತಮ್ಯದ ಮನೋಭಾವನೆಯನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಈ ಕಾರ್ಯಯೋಜನೆಯನ್ನು ರಾಮನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ರಾಮನಗರ ಜಿಲ್ಲೆಯ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ರಾಮನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಾಂತರಾಜು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಮ್ಹಾನ್ಸ್ ಸಂಸ್ಥೆಯ ಮನೋರೋಗ ವಿಭಾಗದ ಡಾ. ಸಂತೋಷ್ ಲೋಗನಾಥನ್ ವಹಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿಗಳಾದ ಡಾ. ಮಂಜುನಾಥ್, ಮನೋರೋಗ ತಜ್ಞ ಡಾ. ಆದರ್ಶ್, ನಿಮ್ಹಾನ್ಸ್ ಸಂಸ್ಥೆಯ ಮನೋವೈದ್ಯಕೀಯ ಸಮಾಜಕಾರ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅನೀಶ್ ಚೆರಿಯನ್, ನಿಮ್ಹಾನ್ಸ್ ಸಂಸ್ಥೆಯ ಹಿರಿಯ ಸಂಶೋಧನಾ ವಿದ್ಯಾರ್ಥಿ ಗುರುಚರಣ್, ಸಂಶೋಧನಾ ಸಹಾಯಕರಾದ ರಾಕೇಶ್ ಮತ್ತು ನೂರಲ್ಲಾ, ಮಾನಸಿಕ ಆರೋಗ್ಯ ವಿಭಾಗದ ಮನೋವೈದ್ಯಕೀಯ ಕಾರ್ಯಕರ್ತೆ ಎಸ್. ಪದ್ಮರೇಖಾ, ಕಮ್ಯೂನಿಟಿ ನರ್ಸ್ ಪವಿತ್ರಾ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಇದ್ದರು.