ಮಗಳ ಜನುಮ ದಿನದ ಅಂಗವಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣೆ

ರಾಮನಗರ : ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಜೊತೆಯಲ್ಲಿ ಸಂಘಸಂಸ್ಥೆಗಳು ಕೈಜೋಡಿಸಬೇಕು ಎಂದು ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಮಾದು ತಿಳಿಸಿದರು.
ಹರೀಶ್ ಜಾದವ್ ಮತ್ತು ಕಾವ್ಯರಾವ್ ದಂಪತಿಗಳು ತಮ್ಮ ಮಗಳಾದ ಕ್ಷಿತಿ ಜಾದವ್ ಅವರ ಮೊದಲ ವರ್ಷದ ಜನುಮ ದಿನದ ಅಂಗವಾಗಿ ತಾಲ್ಲೂಕಿನ ಕೃಷ್ಣಾಪುರದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮವಾದ ಶಿಕ್ಷಣ ದೊರೆಯುತ್ತಿದೆ. ಪೆÇೀಷಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ತಿಳಿಸಿದರು.
ಕವಿತಾರಾವ್ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೃಷ್ಣಾಪುರದೊಡ್ಡಿಯ ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಇತರೆ ಸಂಘಸಂಸ್ಥೆಗಳಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಸತೀಶ್ ಮಾತನಾಡಿ ಕಳೆದ 20 ವರ್ಷಗಳಿಂದ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕವಿತಾರಾವ್ ಅವರು ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವುದು ಶ್ಲಾಘನೀಯ ಎಂದರು.
ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಶಿಸ್ತು, ಶ್ರದ್ಧೆಯನ್ನು ಕಲಿತುಕೊಳ್ಳಬೇಕು. ಈಗಿನಿಂದಲೇ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಶಾಲೆಯ ಮುಖ್ಯಶಿಕ್ಷಕಿ ರೋಜಾರಾಣಿ, ಶಿಕ್ಷಕರಾದ ನಾಗರತ್ನಮ್ಮ, ಉಷಾ, ಶಾಂತಲಾ ಚಾರಿಟಬಲ್ ಟ್ರಸ್ಟಿನ ಸಂಸ್ಥಾಪಕ ಕಾರ್ಯದರ್ಶಿ ಕವಿತಾರಾವ್, ನಾಗೇಂದ್ರರಾವ್, ಚಿತ್ರಾರಾವ್, ಹರೀಶ್ ಜಾದವ್, ಕಾವ್ಯರಾವ್ ಇದ್ದರು. ಇದೇ ಸಂದರ್ಭದಲ್ಲಿ ಪೂಜಾ ಭರತ ನಾಟ್ಯವನ್ನು ಪ್ರದರ್ಶಿಸಿದರು.

Leave a Reply

Your email address will not be published. Required fields are marked *