ಗಾಂಧೀಜಿ ಒಬ್ಬರಿಂದಲೇ ಸ್ವಾತಂತ್ರ್ಯ ಬಂದಿಲ್ಲ : ಬಿ.ಎಲ್. ಸಂತೋಷ್
ಹುಬ್ಬಳ್ಳಿ : ಗಾಂಧೀಜಿ ಒಬ್ಬರ ಕಾರಣದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ ಎಂದು ಬಿಂಬಿಸಲಾಗುತ್ತಿದೆ. ಇದು ಇತರ ಹೋರಾಟಗಾರರಿಗೆ ಮಾಡುವ ಅವಮಾನ. ಇತರ ಹೋರಾಟಗಾರರನ್ನು ಸ್ಮರಿಸಿದರೆ ಗಾಂಧೀಜಿಗೆ ಅವಮಾನಿಸಿದಂತೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿಳಿಸಿದರು.
ಪ್ರಜ್ಞಾ ಪ್ರವಾಹ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ. ಸಂತೋಷಕುಮಾರ ಪಿ.ಕೆ ಅನುವಾದಿಸಿರುವ ‘ಸ್ವರಾಜ್ –75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಾವರ್ಕರ್ ಅವರಿಗೆ ಅವಮಾನಿಸಿದರೆ ರೌರವ ನರಕಕ್ಕೆ ಹೋಗಬೇಕಾಗುತ್ತದೆ. ಸಾವರ್ಕರ್ ಕ್ಷಮಾಪಣೆ ಕೇಳಿದರು, ಅವರಿಗೆ ಪಿಂಚಣಿ ಸಿಗುತ್ತಿತ್ತು ಎಂಬ ಹಸಿ ಸುಳ್ಳುಗಳನ್ನು ರಾಜಕೀಯ ಕಾರಣಕ್ಕೆ ಹೇಳಲಾಗುತ್ತಿದೆ. ಇಂತಹ ಅಪಮಾನಗಳು ನಿಲ್ಲದಿದ್ದರೆ ನಾವು ನಿಲ್ಲಿಸುತ್ತೇವೆ ಎಂದು ಎಚ್ಚರಿಸಿದರು.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :