ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ನಿಧನ
ಲಖನೌ: ಸಮಾಜವಾದಿ ಪಕ್ಷದ ವರಿಷ್ಠ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ (82) ಅವರು ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಅಕ್ಟೋಬರ್ 2 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು. “ನನ್ನ ಗೌರವಾನ್ವಿತ ತಂದೆಯವರು ಹಾಗೂ ಎಲ್ಲರ ನಾಯಕ ಇನ್ನಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಿಳಿಸಿರುವುದಾಗಿ ಸಮಾಜವಾದಿ ಪಕ್ಷದ ಟ್ವಿಟರ್ ಪುಟದಲ್ಲಿ ಮಾಹಿತಿಯನ್ನು ತಿಳಿಸಲಾಗಿದೆ.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :