ಆಜಾದ್ ಬ್ರಿಗೇಡ್ ಸಂಘಟನೆ ವತಿಯಿಂದ ವೇಣುಗೋಪಾಲಸ್ವಾಮಿ ದೇವಸ್ಥಾನದ ಸ್ವಚ್ಛತಾ ಕಾರ್ಯ
ಚನ್ನಪಟ್ಟಣ : ಆಜಾದ್ ಬ್ರಿಗೇಡ್, ಕರ್ನಾಟಕ ಸಂಘಟನೆಯ ಮಹಾತ್ವಾಕಾಂಕ್ಷೆ ಯೋಜನೆ ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನ ಅಡಿಯಲ್ಲಿ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ದ ಆವರಣದ ಸ್ವಚ್ಛತಾ ಕಾರ್ಯ ಯಶಸ್ವಿಯಾಗಿ ಜರುಗಿತು.
ಚನ್ನಪಟ್ಟಣ ನಗರ ವ್ಯಾಪ್ತಿಯ ಚಿಕ್ಕಮಳೂರಿನ ಕಣ್ವ ನದಿಯ ದಂಡೆಯಲ್ಲಿ ಚೋಳರಸರ ಕಾಲದಲ್ಲಿ ನಿರ್ಮಾಣಗೊಂಡು, ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಜೀರ್ಣೋದ್ಧಾರಗೊಂಡು ವೈಭವವನ್ನು ಕಂಡಿದ್ದ ಇತಿಹಾಸ ಪ್ರಸಿದ್ಧ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನವಿಂದು ಅವಸಾನದ ಅಂಚಿನಲ್ಲಿದೆ. ಕೇವಲ ಆದಾಯವನ್ನು ತರುವ ದೇವಸ್ಥಾನಗಳನ್ನು ಕುರಿತು ಮಾತ್ರ ಚಿಂತಿಸುವ ಮುಜರಾಯಿ ಇಲಾಖೆಯ ದಿವ್ಯ ನಿರ್ಲಕ್ಷ್ಯತೆ ಹಾಗೂ ಬೇಜವಾಬ್ದಾರಿತನ ದೇವಸ್ಥಾನದ ಇಂದಿನ ಅವನತಿಗೆ ಕಾರಣವಾಗಿದೆ.
ಇಂತಹ ಪುರಾತನ ಹಾಗೂ ಇತಿಹಾಸ ಪ್ರಸಿದ್ಧ ದೇವಸ್ಥಾನದ ಗತವೈಭವವನ್ನು ಮರಳಿ ಸ್ಥಾಪಿಸಲು ಆಜಾದ್ ಬ್ರಿಗೇಡ್, ಕರ್ನಾಟಕ ಸಂಘಟನೆಯು ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನ ಎಂಬ ಯೋಜನೆಯಡಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ದಿನಾಂಕ 8.10.2022ರ ಶನಿವಾರದಂದು ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿ, ಯಶಸ್ವಿಯಾಗಿ ಸ್ವಚ್ಛತಾ ಕಾರ್ಯವನ್ನು ಪೂರೈಸಲಾಯಿತು.

ಆಜಾದ್ ಬ್ರಿಗೇಡ್, ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಹಾಗೂ ಹಿತೈಷಿಗಳಾದ ಜೆ.ಗಜೇಂದ್ರ ಸಿಂಗ್, ಸುರೇಶ.ಆರ್, ಶ್ರೀಹರಿ ಶ್ರೀಕಾಂತ್, ಸತೀಶ್ ಕುಮಾರ್.ಎಸ್, ಧ್ಯಾನ್ ಸಾಗರ್, ಸುಮಂತ್, ಮನೋಜ್, ಸಂಜಯ್, ರಮೇಶ್, ಚಿದಾನಂದ್, ಪಾರ್ಥ, ಕಾರ್ತಿಕ್, ಶಂಕರ್ ರೆಡ್ಡಿ, ಕೋಟೆ ಸುರೇಶ್, ಸುಕನ್ಯಾ.ಜಿ.ಎಸ್, ಲತಾ.ಆರ್, ಸಾಕೇತ್ ಶ್ರೀರಾಮ್ ಹಾಗೂ ಸಾನ್ವಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಸದರಿ ದೇವಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿದ್ದರೂ ಸಹ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಕಾರಣ ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದು, ಅಧಿಕಾರಿ ವರ್ಗ ಹಾಗೂ ಭಕ್ತವರ್ಗದ ಸಹಯೋಗದೊಂದಿಗೆ ದೇವಸ್ಥಾನವನ್ನು ಅಭಿವೃದ್ಧಿಪಡಿಸಲು ರೂಪುರೇಷೆಯನ್ನು ಸಿದ್ಧಪಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೇವಸ್ಥಾನದಲ್ಲಿ ಪ್ರತಿನಿತ್ಯ ಪೂಜಾ ಕೈoಕರ್ಯಗಳು ನಡೆಯುವಂತೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸಹ ಆಜಾದ್ ಬ್ರಿಗೇಡ್ ಸಂಘಟನೆ ಮುಂದಾಗಿದ್ದು, ದಿನಾಂಕ 14.10.2022ರ ಶುಕ್ರವಾರದಂದು ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಈ ಮೂಲಕ ಕೋರಿಕೊಳ್ಳುತ್ತೇವೆ.
ಇಂತಿ ತಮ್ಮವ
ಸುರೇಶ. ಆರ್
ಪ್ರಧಾನ ಕಾರ್ಯದರ್ಶಿ
ಆಜಾದ್ ಬ್ರಿಗೇಡ್, ಕರ್ನಾಟಕ.
ಮೊ. ಸಂ: 9611006100
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/HK9U7zQD11W79PK8sGwVCS
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :
WhatsApp : 9880439669
Mail : hairamanagara.news@gmail.com
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಿಭಾಗಕ್ಕೆ ವ್ಯಕ್ತಿ ಪರಿಚಯ, ಸುದ್ದಿ ಚಿತ್ರಗಳು, ಲೇಖನಗಳು, ಪುಸ್ತಕ ವಿಮರ್ಶೆ, ಕುಂದುಕೊರತೆ, ಸಿನೆಮಾ ವಿಮರ್ಶೆ, ನಾಟಕ ವಿಮರ್ಶೆ, ಕತೆ, ಕವನ, ವರದಿ ಮೊದಲಾದ ವಿಷಯ ವೈವಿಧ್ಯಗಳನ್ನು ಕಳಿಸಲು ವ್ಯಾಟ್ಸ್ ಪ್ ಅಥವಾ ಮೇಲ್ ಮಾಡಿ.
WhatsApp : 9880439669
Mail : hairamanagara.news@gmail.com