ಮದ್ಯಪಾನದಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೆ ಆತನ ಕುಟುಂಬದ ನೆಮ್ಮದಿಯು ಹಾಳಾಗುತ್ತದೆ : ಕೃಷ್ಣಕಾಂತ್
ಕನಕಪುರ : ನಾಗರಿಕ ಸಮಾಜಕ್ಕೆ ಮದ್ಯಪಾನ ಒಂದು ಪಿಡುಗಾಗಿದ್ದು ಮದ್ಯಪಾನದಿಂದ ವ್ಯಕ್ತಿಯ ಆರೋಗ್ಯ ಕೆಡುವುದಲ್ಲದೆ ಆತನ ಕುಟುಂಬದ ನೆಮ್ಮದಿಯು ಹಾಳಾಗುತ್ತದೆ ಎಂದು ಜಿಲ್ಲಾ ಯುವ ಸ್ಪಂದನ ಕೇಂದ್ರದ ಪ್ರವರ್ತಕ ಕೃಷ್ಣಕಾಂತ್ ತಿಳಿಸಿದರು.
ನಗರದ ರೂರಲ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಆಯೋಜಿಸಿದ್ದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಕಿರು ನಾಟಕದ ಮೂಲಕ ಅರಿವು ಮೂಡಿಸಿ ಮಾತನಾಡಿದ ಅವರು, ಇಂದಿನ ಯುವ ಜನತೆ ಕುಡಿತವನ್ನು ಮೋಜು-ಮಸ್ತಿಗಾಗಿ ನಡೆಸುತ್ತಿದ್ದು ಇದು ಅವರ ಮುಂದಿನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದರು.
ನಮ್ಮ ದೇಶದ ಶಕ್ತಿಯಾಗಿರುವ ಯುವ ಜನಾಂಗ ತಮ್ಮ ಸಾಮರ್ಥ್ಯ ಹಾಗೂ ಶಕ್ತಿಯನ್ನು ವಿದ್ಯೆಯ ಕಡೆಗೆ ನೀಡಿದರೆ ತಮ್ಮ ಮುಂದಿನ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಲಿದ್ದು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂಬುದನ್ನು ಅರಿತು ದುಶ್ಚಟಗಳಿಗೆ ಬಲಿಯಾಗದಂತೆ ಸಲಹೆ ನೀಡಿದರು.
ಅತಿಥಿಗಳಾಗಿದ್ದ ನಿವೃತ್ತ ಶಿಕ್ಷಕ ಚಿಕ್ಕಮರೀಗೌಡ ಮಾತನಾಡಿ, ಯುವ ಜನಾಂಗ ಕಲಿಕೆಯ ಸಮಯದಲ್ಲಿ ದುಶ್ಚಟಗಳಿಗೆ ಬಲಿಯಾಗದೇ ಓದಿನ ಕಡೆ ಹೆಚ್ಚು ಗಮನಹರಿಸುವಂತೆ ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ವಿದ್ಯಾ ಪ್ರಚಾರಕ ಸಂಘದ ಅಧ್ಯಕ್ಷ ಕೆ.ಬಿ. ನಾಗರಾಜು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಲಿಕಾ ಸಮಯದಲ್ಲಿ ಓದಿನ ಕಡೆಗೆ ಹೆಚ್ಚು ಗಮನ ಹರಿಸುವ ಜೊತೆಗೆ ಸಮಾಜ ಸೇವೆಗಳಲ್ಲೂ ತೊಡಗಿಸಿಕೊಂಡು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಲು ಗ್ರಾಮೀಣ ಭಾಗದ ಜನರಲ್ಲಿ ಅರಿವು ಮೂಡಿಸುವಂತಹ ಕೆಲಸವನ್ನು ಮಾಡಿದಾಗ ಸಮಾಜದಲ್ಲಿ ಉತ್ತಮವಾದ ವಾತಾವರಣವನ್ನು ಕಾಣಬಹುದಾಗಿದೆ ಎಂದು ತಿಳಿಸಿದರು.
ಕಳೆದ ಒಂದು ವಾರದಿಂದ ನಡೆದ ಶಿಬಿರದಲ್ಲಿ ವಿದ್ಯಾರ್ಥಿ ಗಳು ಬಹಳ ಆಸಕ್ತಿ ಹಾಗೂ ಶ್ರದ್ಧೆಯಿಂದ ಪಾಲ್ಗೊಂಡು ಸೇವಾ ಕಾರ್ಯದ ಜೊತೆಗೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಸಂಸ್ಥೆಯ ಖಜಾಂಚಿಯಾದ ಪುಟ್ಟಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಗದಿಗೆಪ್ಪ ಹಿತ್ತಲ್ಮನಿ, ಶಿಬಿರಾಧಿಕಾರಿ ವಿಶ್ವನಾಥ್ ಉಪಸ್ಥಿತರಿದ್ದರು.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :
https://chat.whatsapp.com/HK9U7zQD11W79PK8sGwVCS
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :
WhatsApp : 9880439669
Mail : hairamanagara.news@gmail.com
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಿಭಾಗಕ್ಕೆ ವ್ಯಕ್ತಿ ಪರಿಚಯ, ಸುದ್ದಿ ಚಿತ್ರಗಳು, ಲೇಖನಗಳು, ಪುಸ್ತಕ ವಿಮರ್ಶೆ, ಕುಂದುಕೊರತೆ, ಸಿನೆಮಾ ವಿಮರ್ಶೆ, ನಾಟಕ ವಿಮರ್ಶೆ, ಕತೆ, ಕವನ, ವರದಿ ಮೊದಲಾದ ವಿಷಯ ವೈವಿಧ್ಯಗಳನ್ನು ಕಳಿಸಲು ವ್ಯಾಟ್ಸ್ ಪ್ ಅಥವಾ ಮೇಲ್ ಮಾಡಿ.
WhatsApp : 9880439669
Mail : hairamanagara.news@gmail.com