ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ನವದೆಹಲಿ : ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ.
ಈ ಮೂಲಕ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕೂರಲಿದ್ದು, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ತಿಳಿಸಿದ್ದಾರೆ.
2017 ಮತ್ತು 2019 ರ ನಡುವಿನ ಎರಡು ವರ್ಷಗಳನ್ನು ಹೊರತುಪಡಿಸಿ ರಾಹುಲ್ ಗಾಂಧಿಯವರು ಅಧಿಕಾರ ವಹಿಸಿಕೊಂಡ ನಂತರ 1998 ರಿಂದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿಯವರ ಸ್ಥಾನವನ್ನು ಖರ್ಗೆ ಅವರು ಬದಲಾಯಿಸಲಿದ್ದಾರೆ.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :