ನವೆಂಬರ್ 1ರಂದು ಬಿಡುಗಡೆಯಾಗಲಿರುವ ಜೆಡಿಎಸ್‌ನ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು : ಎಚ್.ಡಿ. ಕುಮಾರಸ್ವಾಮಿ
ಮೈಸೂರು : ನವೆಂಬರ್ 1ರಂದು ಬಿಡುಗಡೆ ಮಾಡಲಿರುವ ಜೆಡಿಎಸ್‌ನ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು ಎಂದು ಕುಮಾರಸ್ವಾಮಿ, ಚುನಾವಣೆಯಲ್ಲಿ ಪುತ್ರ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದರು.
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ರೆಸಾರ್ಟ್ನಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗ ಆಯೋಜಿಸಿದ್ದ ಸಮಾಲೋಚನಾ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕೆಸರೆರಚಾಟದಲ್ಲಿ ತೊಡಗಿರುವ ಕಾಂಗ್ರೆಸ್–ಬಿಜೆಪಿಯವರು, ಮೈತ್ರಿ ಅನಿವಾರ್ಯವಾದರೆ ಅನುಕೂಲವಾಗುತ್ತದೆಂದು ಪಕ್ಷವನ್ನು ಟೀಕಿಸುತ್ತಿಲ್ಲ ಎಂದು ತಿಳಿಸಿದರು.
ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಅಸ್ತಿತ್ವವಿಲ್ಲ ಎಂದು ಕೆಲವರು ಹೇಳುತ್ತಾರೆ. ಈ ಬಾರಿ 35 ರಿಂದ 40 ಮಂದಿ ಅಲ್ಲಿನವರೇ ಆಯ್ಕೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :