ನಾಳೆ (ನ.25ರಂದು) ಸರ್ಕಾರಿ ನೌಕರರ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭ : ಕೆ. ಸತೀಶ್
ರಾಮನಗರ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ-2022 ಹಾಗೂ ರಾಜ್ಯ ಸರ್ಕಾರಿ ನೌಕರರ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 25ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ರಾಮನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸುವರು.


ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಈ ಬಾರಿ ವಿಕಲಚೇತನರಿಗೂ ಸನ್ಮಾನ ಮಾಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


“ಹಾಯ್ ರಾಮನಗರ” ಫೇಸ್‌ಬುಕ್ ಪುಟವನ್ನು ಫಾಲೋ ಮಾಡಿ :
https://www.facebook.com/HaiRamanagara
“ಹಾಯ್ ರಾಮನಗರ” ಡಿಜಿಟಲ್ ನ್ಯೂಸ್ ವಾಟ್ಸ್ ಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ :