ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವಂತಿಲ್ಲ
ನವದೆಹಲಿ : ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಯನ್ನು ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಶಾಲೆಯಿಂದ ಹೊರಗಿಡುವಂತಿಲ್ಲ. ಪರೀಕ್ಷೆ ಬರೆಯಲು ಅವಕಾಶವನ್ನೂ ನಿರಾಕರಿಸುವಂತಿಲ್ಲ’ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಶುಲ್ಕ ಪಾವತಿ ಮಾಡಿಲ್ಲವೆಂದು ಖಾಸಗಿ ಶಾಲೆಯೊಂದು 10ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಬೋರ್ಡ್ ಪರೀಕ್ಷೆಯಿಂದ ಹೊರಗಿಟ್ಟಿತ್ತು. ಶಾಲಾ ಆಡಳಿತದ ಕ್ರಮ ಪ್ರಶ್ನಿಸಿ ಆತ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರಣ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸುವುದು ವಿದ್ಯಾರ್ಥಿಯ ಹಕ್ಕಿನ ಉಲ್ಲಂಘನೆಯಾಗಲಿದೆ. ಶೈಕ್ಷಣಿಕ ವರ್ಷದ ನಡುವೆಯೇ ಆತನ ಮೇಲೆ ಈ ರೀತಿಯ ನಿರ್ಬಂಧ ಹೇರಿರುವುದು ಸರಿಯಲ್ಲ ಎಂದು ತಿಳಿಸಿದೆ.
ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ ನ್ಯಾಯಪೀಠ, ₹30 ಸಾವಿರ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗೆ ನಿರ್ದೇಶಿಸಿದೆ. ಇದಕ್ಕಾಗಿ ನಾಲ್ಕು ವಾರಗಳ ಕಾಲಾವಕಾಶವನ್ನೂ ನೀಡಿದೆ.
ನಿರಂತರ ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :