ರಾಮನಗರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಜಿ.ಎಚ್. ರಾಮಯ್ಯ
ರಾಮನಗರ : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಮನಗರ ತಾಲ್ಲೂಕು ಮಟ್ಟದ ಏಳನೇ ಸಾಹಿತ್ಯ ಸಮ್ಮೇಳನವು ಫೆಬ್ರವರಿ 25ರಂದು ತಾಲ್ಲೂಕಿನ ಕೈಲಾಂಚ ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷತೆಯನ್ನು ಕವಿ ಜಿ.ಎಚ್. ರಾಮಯ್ಯ ವಹಿಸಲಿದ್ದಾರೆ. ಗೌಡಯ್ಯನ ದೊಡ್ಡಿ ಗ್ರಾಮದ ರಾಮಯ್ಯ ಅವರು ಎಂ, ಎ. ಎಲ್ಎಲ್‌ಬಿ ಪದವೀಧರರಾಗಿದ್ದು, 1987 ರಲ್ಲಿ ಬಿಡದಿಯ ಶ್ರೀ ಬಸವೇಶ್ವರ ಸ್ವಾಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ತಮ್ಮ ವೃತ್ತಿ ಜೀವನ ಪ್ರಾರಂಭಿಸಿದರು. 2006-2008ರ ಅವಧಿಯಲ್ಲಿ ಕನ್ನಡ ಉಪನ್ಯಾಸಕರ ಸಮಿತಿಗೆ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2014-2015 ರ ಅವಧಿಯಲ್ಲಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಖಜಾಂಚಿಯಾಗಿ ಸೇವೆ ಸಲ್ಲಿಸದ್ದಾರೆ. ಜತೆಗೆ ಕನ್ನಡಪರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :