ಲಿಪ್ ಸ್ಟಿಕ್ ಹಚ್ಚಿಕೊಳ್ಳುವ ಪತಿ : ಪೊಲೀಸ್ ಠಾಣೆಗೆ ದೂರು ಕೊಟ್ಟ ಪತ್ನಿ
ಬೆಂಗಳೂರು : ನನ್ನ ಪತಿ ಲಿಪ್‌ಸ್ಟಿಕ್ ಹಚ್ಚಿಕೊಳ್ಳುತ್ತಾರೆ. ಹೆಂಗಸರ ಒಳಉಡುಪು ತೊಟ್ಟುಕೊಂಡು ವಿಚಿತ್ರವಾಗಿ ವರ್ತಿಸುತ್ತಾರೆ. ದಿನದಿಂದ ದಿನಕ್ಕೆ ಅವರ ವರ್ತನೆ ಬದಲಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕುಮಾರಸ್ವಾಮಿ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.
ಠಾಣೆ ವ್ಯಾಪ್ತಿಯಲ್ಲಿ ವಾಸವಿರುವ 25 ವರ್ಷದ ಮಹಿಳೆ ದೂರು ನೀಡಿದ್ದಾರೆ. ವರದಕ್ಷಿಣೆಗಾಗಿ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಆರೋಪದಡಿ ಪತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೂರಿನಲ್ಲಿರುವ ಮಾಹಿತಿ :
ವೈವಾಹಿಕ ಜಾಲತಾಣದ ಮೂಲಕ ಪರಿಚಯವಾಗಿ ಮದುವೆಯಾಗಿದ್ದೆ. ಮೊದಲ ದಿನದಿಂದಲೂ ವಿಚಿತ್ರವಾಗಿ ವರ್ತಿಸುತ್ತಿರುವ ಪತಿ, ತಮಗೆ ಪುರುಷರೆಂದರೆ ಇಷ್ಟವೆಂದು ಕೂಗಾಡುತ್ತಾರೆ. ಅದನ್ನು ಪ್ರಶ್ನಿಸಿದರೆ, ಮನೆ ಬಿಟ್ಟು ಹೋಗುವಂತೆ ಹಾಗೂ ವರದಕ್ಷಿಣೆ ತರುವಂತೆ ಪೀಡಿಸುತ್ತಾರೆ. ಹಲವು ಬಾರಿ ಹಲ್ಲೆ ಸಹ ಮಾಡಿದ್ದಾರೆ’ ಎಂದು ದೂರಿನಲ್ಲಿ ಮಹಿಳೆ ಹೇಳಿದ್ದಾರೆ.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :