ನಾಳೆ (ಏಪ್ರಿಲ್ 3) ದೊಡ್ಡಗಂಗವಾಡಿ ಗ್ರಾಮದಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ಅನಾವರಣ
ರಾಮನಗರ : ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗಳ ಪುತ್ಥಳಿ ಅನಾವರಣ ಹಾಗೂ ಬಸವೇಶ್ವರರ ಜಯಂತಿ ಕಾರ್ಯಕ್ರಮ ಏಪ್ರಿಲ್ 3 ರ ಸೋಮವಾರ ಬೆಳಿಗ್ಗೆ 8 ಗಂಟೆಗೆ ತಾಲ್ಲೂಕಿನ ಕೂಟಗಲ್ ಹೋಬಳಿಯ ದೊಡ್ಡಗಂಗವಾಡಿ ಗ್ರಾಮದಲ್ಲಿ ನಡೆಯಲಿದೆ.

ಡಾ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಅವರು ಅನಾವರಣ ಮಾಡಲಿದ್ದಾರೆ. ಕಾರ್ಯಕ್ರಮದ ನೇತೃತ್ವವನ್ನು ಚನ್ನಪಟ್ಟಣ ತಾಲ್ಲೂಕಿನ ಬೇವೂರು ಮಠದ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಸೋಮವಾರ ಬೆಳಿಗ್ಗೆ 10.30 ಗಂಟೆಗೆ ತಮಟೆ ವಾದ್ಯ ಸಮೇತ ದೇವರುಗಳೊಂದಿಗೆ ತಂಬಿಟ್ಟಿನ ಆರತಿ ಉತ್ಸವ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ ಏರ್ಪಡಿಸಲಾಗಿದೆ.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :
https://www.facebook.com/HaiRamanagara?mibextid=ZbWKwL
ಟ್ವಿಟರ್ : http://twitter.com/hairamanagara