ಅಗತ್ಯ ಸೇವೆಯಲ್ಲಿರುವವರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನಕ್ಕೆ ಅವಕಾಶ : ಶಿವಾನಂದಮೂರ್ತಿ
ರಾಮನಗರ : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ದಿನದಂದು ಅಗತ್ಯ ಸೇವೆಯಲ್ಲಿರುವವರಿಗೆ ಅಂಚೆ ಮತಪತ್ರಗಳ ಮೂಲಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರು ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ ಅಗತ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂದರೆ ವಿದ್ಯುತ್ ಇಲಾಖೆ, ಬಿ.ಎಸ್.ಎನ್.ಎಲ್., ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ವಿಮಾನಯಾನ, ಸಾರಿಗೆ ಸೇವೆ (ಕೆ.ಎಸ್.ಆರ್.ಟಿ.ಸಿ), ಅಗ್ನಿಶಾಮಕದಳ, ಚುನಾವಣಾ ದಿನದ ಕವರೇಜ್ ಮಾಡುವ ಅಧಿಕೃತ ಮಾಧ್ಯಮ ಪ್ರತಿನಿಧಿಗಳು, ಸಂಚಾರ (ಟ್ರಾಫಿಕ್) ಪೊಲೀಸ್ ಹಾಗೂ ಆಂಬ್ಯುಲೆನ್ಸ್ ಸೇವೆಯಲ್ಲಿರುವವರಿಗೆ ಅಂಚೆ ಮತಪತ್ರಗಳ ಮೂಲಕ ಮತಚಲಾಯಿಸಲು ಅವಕಾಶವಿರುತ್ತದೆ. ಅಗತ್ಯ ಸೇವೆಯಲ್ಲಿರುವವರು ಮತದಾನ ದಿನದ ಏಳು ದಿನ ಮುಂಚಿತವಾಗಿ ನಮೂನೆ 12ಡಿ ರಲ್ಲಿ ಭರ್ತಿ ಮಾಡಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ನಮೂನೆ ಸಲ್ಲಿಸಿದ ಬಳಿಕ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳ ಮುಖ್ಯಸ್ಥರು ಅನುಮೊದನೆ ನೀಡಬೇಕು. ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಗೌಪ್ಯವಾಗಿ ಅಂಚೆ ಮತಪತ್ರಗಳ ಮೂಲಕ ಮತ ಚಲಾವಣೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದರು.
ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ, ಸಂಸ್ಥೆಗಳು, ಮತದಾನದಿನದಂದು ಅಗತ್ಯ ಸೇವೆಯಲ್ಲಿ ಕಾರ್ಯನಿರ್ವಹಿಸುವ ನೌಕರರು, ಸಿಬ್ಬಂದಿಗೆ ನಮೂನೆ ಅರ್ಜಿ ಸಲ್ಲಿಸುವ ಕುರಿತಂತೆ ಮಾಹಿತಿ ನೀಡುವುದರ ಜೊತೆಗೆ ಮತದಾನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಹೇಳಿದರು.
ಅಗತ್ಯ ಸೇವೆಗಳ ಮಾಹಿತಿಯನ್ನು ಒದಗಿಸಲು ನೋಡಲ್ ಅಧಿಕಾರಿ ಶ್ರೀಮತಿ ರಮ್ಯ (ಮೊ.ನಂ. 7975159259) ರವರನ್ನು ನಿಯೋಜಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :
https://www.facebook.com/HaiRamanagara?mibextid=ZbWKwL
ಟ್ವಿಟರ್ : http://twitter.com/hairamanagara