ಅಕ್ರಮ ತಡೆಯುವಲ್ಲಿ ಚುನಾವಣಾ ಆಯೋಗ ವಿಫಲ : ಮಲ್ಲಿಕಾರ್ಜುನ್
ಕನಕಪುರ : ಈ ಭಾರಿ ಚುನಾವಣೆಯಲ್ಲಿ ಭಾರೀ ಅಕ್ರಮಗಳು ಹಾಗೂ ಮತದಾರರನ್ನು ಆಮಿಷದ ಮೂಲಕ ಓಲೈಸಲಾಗಿದ್ದು, ಈ ಅಕ್ರಮ ತಡೆಯುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ ಎಂದು ಕನಕಪುರ ವಿಧಾನಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗವು ಕಟ್ಟುನಿಟ್ಟಿನ ಕ್ರಮದೊಂದಿಗೆ ಚುನಾವಣೆಯನ್ನು ಪಾರದರ್ಶಕತೆಯಿಂದ ನಡೆಸುವುದಾಗಿ ಹೇಳಿತ್ತು. ಆದರೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಪಾರದರ್ಶಕತೆ ಕಾಣಲಿಲ್ಲ ಎಂದು ದೂರಿದರು.
ಈ ಬಾರಿ ಚುನಾವಣೆಯಲ್ಲಿ ಕುರುಡು ಕಾಂಚಾಣ ಭಾರೀ ಸದ್ದು ಮಾಡಿದ್ದು, ಮತದಾರರಿಗೆ 1 ಸಾವಿರದಿಂದ 2 ಸಾವಿರದಷ್ಟು ಹಣವನ್ನು ಬಹಿರಂಗವಾಗಿಯೇ ಹಂಚಿಕೆ ಮಾಡಿದ್ದಾರೆ. ಮೂಗುತಿ ಸೇರಿದಂತೆ ಇತರ ಗಿಫ್ಟ್‌ಗಳನ್ನು ಹಂಚಿಕೆ ಮಾಡಿ ಮತದಾರರನ್ನು ಖರೀದಿ ಮಾಡಿದ್ದಾರೆ. ಆದರೆ ಚುನಾವಣಾ ಆಯೋಗದಿಂದ ಯಾವ ದೂರು ದಾಖಲಾಗಿಲ್ಲ ಎಂದರು.
ಸಂವಿಧಾನದ ಆಶಯದಂತೆ ಅನುಗುಣವಾಗಿ ಚುನಾವಣಾ ಆಯೋಗ ಚುನಾವಣೆ ನಡೆಸುವುದಾಗಿ ತಿಳಿಸಿತ್ತು. ಆದರೆ ಎಲ್ಲ ನಿಯಮ ಗಾಳಿಗೆ ತೂರಿ ಚುನಾವಣೆ ಅಕ್ರಮವಾಗಿ ನಡೆದಿದ್ದರೂ ಇಲಾಖೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳಿಗೆ ಮುಕ್ತ ಅವಕಾಶ ಸಿಗಬೇಕು. ಆದರೆ ಇಲ್ಲಿ ಹಣ ಮತ್ತು ಅಧಿಕಾರ ಇದ್ದವರಿಗೆ ಮಾತ್ರ ಅವಕಾಶ ದೊರೆಯುತ್ತಿದೆ. ಅವರು ಪ್ರಭಾವ ಬಳಸಿ ಚುನಾವಣೆ ಗೆಲ್ಲುತ್ತಾರೆ. ಸಾಮಾನ್ಯ ವ್ಯಕ್ತಿಗಳು, ಚಿಂತನೆಗಳಿಗೆ ಬೆಲೆ ಇಲ್ಲದಂತಾಗಿದೆ. ಹಣವಿದ್ದವರು ಮಾತ್ರ ಚುನಾವಣೆಗೆ ನಿಲ್ಲಬೇಕು ಎಂಬುದಾಗಿದೆ ಎಂದು ಆರೋಪಿಸಿದರು.

ಸಹೃದಯ ಓದುಗರೆ, ಸಾಹಿತ್ಯ, ಕಲೆ, ಸಂಸ್ಕೃತಿ, ರಾಜಕೀಯ, ಸಾಮಾಜಿಕ, ವ್ಯಾಪಾರ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ನಡೆಯುವ ಪ್ರಮುಖ ವಿಚಾರ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮಾಹಿತಿ ಜತೆಗೆ ‘ರಾಮನಗರ ಜಿಲ್ಲೆ’ಯ ಇತಿಹಾಸವನ್ನು ‘ಹಾಯ್ ರಾಮನಗರ’ https://hairamanagara.in ಮೂಲಕ ತಿಳಿಸಲಾಗುವುದು. ಬ್ರೇಕಿಂಗ್ ವರದಿಗಳಿಗಾಗಿ ಆತುರ ಪಟ್ಟು ವರದಿಗಳನ್ನು ನೀಡುವುದಿಲ್ಲ. ವರದಿಗಳ ಖಚಿತತೆ ಲಭ್ಯವಾದ ನಂತರವಷ್ಟೆ ಪ್ರಕಟಿಸಲಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಜನರು ಒಂದೇ ಕ್ಲಿಕ್ ಮೂಲಕ ತಿಳಿದು ಕೊಳ್ಳಬಹುದು. ವಸ್ತುನಿಷ್ಠ ವರದಿಗಳನ್ನು ನೀಡುವುದು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ಮಾಹಿತಿ ನೀಡಲಿದ್ದೇವೆ. ಮಾಹಿತಿ, ಸಲಹೆಗಳಿಗೆ ಸದಾ ಸ್ವಾಗತ… ರಾಮನಗರ ಜಿಲ್ಲೆಯ ಸುದ್ದಿಗಳಿಗಾಗಿ “ಹಾಯ್ ರಾಮನಗರ ಡಾಟ್ ಇನ್” ಓದುತ್ತಿರಿ. ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ – ಎಸ್. ರುದ್ರೇಶ್ವರ ಎಂ.ಎ., ಎಂ.ಫಿಲ್., ಬಿ.ಇಡಿ
ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :
https://chat.whatsapp.com/IY8d8seeQSCIZewIP8uKdh
‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :
https://www.facebook.com/HaiRamanagara?mibextid=ZbWKwL
ಟ್ವಿಟರ್ : http://twitter.com/hairamanagara