ರೈತರ ಬದುಕು ಬವಣೆಯ “ಶ್ರೀಮಂತ” ಸಿನಿಮಾ ಮೇ 19 ರಂದು ಬಿಡುಗಡೆ : ಶಿವರಾಜ್ ದಳವಾಯಿ

ರಾಮನಗರ : ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿಯಲ್ಲಿ ಪ್ರಥಮ ಬಾರಿಗೆ ಸ್ವತಂತ್ರವಾಗಿ ನಿರ್ಮಾಣಗೊಂಡಿರುವ ಶ್ರೀಮಂತ ಸಿನಿಮಾ ಮೇ 19 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ಸಹಾಯಕ ನಿರ್ದೇಶಕ ಶಿವರಾಜ್ ದಳವಾಯಿ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀಮಂತ ಚಿತ್ರ ರೈತನ ದೈನಂದಿನ ಬದುಕು ಬವಣೆಯ ಅನಾವರಣವಾಗಿದ್ದು, ರೈತನೇ ಜಗತ್ತಿನ ಅತೀ ದೊಡ್ಡ ಶ್ರೀಮಂತ ಎಂದು ಸಾಕ್ಷ್ಮೀಕರಿಸುವ, ಮರೆಯಾಗುತ್ತಿರುವ ಹಳ್ಳಿಯ ಸುಗ್ಗಿ, ಜಾತ್ರೆ, ಹಬ್ಬ, ಹಾಡುಹಸೆ, ಹಳ್ಳಿ, ಆಟಗಳು, ಗ್ರಾಮೀಣ ಕಲೆಗಳ ಸಂಭ್ರಮಗಳನ್ನು ನೆನಪಿಸುವುದರೊಂದಿಗೆ ಕರ್ನಾಟಕದ ಜನಪದಕಲೆ, ಸಾಹಿತ್ಯ, ಸಂಸ್ಕೃತಿ ಸಂಭ್ರಮಗಳನ್ನು ತಿಳಿಹಾಸ್ಯದ ಮೂಲಕ ಪೇಕ್ಷಕರಿಗೆ ಮನರಂಜಿಸುವುದು ಚಿತ್ರದ ಆಶಯವಾಗಿದೆ ಎಂದರು.
ಚಿತ್ರದ ನಿರ್ಮಾಪಕ, ನಿರ್ದೇಶಕ ಹಾಸನ್ ರಮೇಶ್, ಜಿ.ನಾರಾಯಣಪ್ಪ, ವಿ.ಸಂಜಯ್ ಬಾಬು ಅವರ ಸಹಕಾರದಲ್ಲಿ ನಿರ್ಮಾಣ ಮಾಡಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ಭಾರತದ ರಿಯಲ್ ಹೀರೋ ಎನಿಸಿಕೊಂಡಿರುವ ಚಿತ್ರನಟ ಸೋನೂ ಸೂದ್ ಅವರು ಪ್ರಪ್ರಥಮವಾಗಿ ಕನ್ನಡ ಚಿತ್ರದಲ್ಲಿ ನಾಯಕನಟರಾಗಿ ಅಭಿನಯಿಸಿದ್ದು, ನಾಯಕಿಯರಾಗಿ ಮುಂಬೈ ಬೆಡಗಿ ವೈಷ್ಣವಿ ಪಟವರ್ಧಬ್, ವೈಷ್ಣವಿ ಚಂದ್ರನ್ ಮೆನನ್ ಜತೆಗೆ ಕಲ್ಯಾಣ ಕರ್ನಾಟಕದ ಕ್ರಾಂತಿ ಎಂಬ ಯುವಪ್ರತಿಭೆಯನ್ನು ಮುಖ್ಯ ಭೂಮಿಕೆಯಲ್ಲಿ ಪರಿಚಯ ಮಾಡಿಕೊಟ್ಟಿದ್ದಾರೆ ಎಂದರು.
ಚಿತ್ರದಲ್ಲಿ ಹಿರಿಯ ಕಲಾವಿದರಾದ ರಮೇಶ್ ಭಟ್, ರವಿಶಂಕರ್ ಗೌಡ, ಸಾಧುಕೋಕಿಲ, ಚರಣ್ ರಾಜ್, ಕಲ್ಯಾಣ ಗಿರಿ, ರಾಜು, ತಾಳಿಕೋಟೆ, ಕುರಿಬಾಂಡ್ ರಂಗ, ಬ್ಯಾಂಕ್ ಮಂಜಣ್ಣ, ಬಸವರಾಜಿ ಹಾಸನ್ ಇನ್ನೂ ಮುಂತಾದ ಗ್ರಾಮೀಣ ರಂಗಭೂಮಿ ಕಲಾವಿದರು ಅಭಿನಯಿಸಿದ್ದಾರೆ ಎಂದು ತಿಳಿಸಿದರು.
ನಾದಬ್ರಹ್ಮ ಡಾ ಹಂಸಲೇಖ ಸಂಗೀತ, ಸಾಹಿತ್ಯವಿದ್ದು, ರವಿಕುಮಾರ್ ಸನ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಾಸ್ ಮಾದ ಸಾಹಸ, ಮದನ್, ಹರಿಣಿ, ಮೋಹನ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ. ಮೇ 19 ರಂದು ರಾಜ್ಯಾದ್ಯಂತ 250 ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುಸಿದ್ದೇಗೌಡ, ಸುರೇಶ್ ಇದ್ದರು.

ಎಸ್. ರುದ್ರೇಶ್ವರ

ಸಹೃದಯ ಓದುಗರೆ, ಸಾಹಿತ್ಯ, ಕಲೆ, ಸಂಸ್ಕೃತಿ, ರಾಜಕೀಯ, ಸಾಮಾಜಿಕ, ವ್ಯಾಪಾರ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ನಡೆಯುವ ಪ್ರಮುಖ ವಿಚಾರ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮಾಹಿತಿ ಜತೆಗೆ ‘ರಾಮನಗರ ಜಿಲ್ಲೆ’ಯ ಇತಿಹಾಸವನ್ನು ‘ಹಾಯ್ ರಾಮನಗರ’ https://hairamanagara.in ಮೂಲಕ ತಿಳಿಸಲಾಗುವುದು. ಬ್ರೇಕಿಂಗ್ ವರದಿಗಳಿಗಾಗಿ ಆತುರ ಪಟ್ಟು ವರದಿಗಳನ್ನು ನೀಡುವುದಿಲ್ಲ. ವರದಿಗಳ ಖಚಿತತೆ ಲಭ್ಯವಾದ ನಂತರವಷ್ಟೆ ಪ್ರಕಟಿಸಲಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಜನರು ಒಂದೇ ಕ್ಲಿಕ್ ಮೂಲಕ ತಿಳಿದು ಕೊಳ್ಳಬಹುದು. ವಸ್ತುನಿಷ್ಠ ವರದಿಗಳನ್ನು ನೀಡುವುದು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ಮಾಹಿತಿ ನೀಡಲಿದ್ದೇವೆ. ಮಾಹಿತಿ, ಸಲಹೆಗಳಿಗೆ ಸದಾ ಸ್ವಾಗತ… ರಾಮನಗರ ಜಿಲ್ಲೆಯ ಸುದ್ದಿಗಳಿಗಾಗಿ “ಹಾಯ್ ರಾಮನಗರ ಡಾಟ್ ಇನ್” ಓದುತ್ತಿರಿ. ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ – ಎಸ್. ರುದ್ರೇಶ್ವರ ಎಂ.ಎ., ಎಂ.ಫಿಲ್., ಬಿ.ಇಡಿ

ಸುದ್ದಿಗಳ ನೋಟಿಫಿಕೇಶನ್ ಗಾಗಿ ಬೆಲ್🔔 ಐಕಾನ್ ಕ್ಲಿಕ್ ಮಾಡಿ ಹಾಗೂ ವಾಟ್ಸಾಪ್ 🪀ಗ್ರೂಪ್ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ :

https://chat.whatsapp.com/IY8d8seeQSCIZewIP8uKdh

‘ಹಾಯ್ ರಾಮನಗರ’ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ :

https://www.facebook.com/HaiRamanagara?mibextid=ZbWKwL

ಟ್ವಿಟರ್ : http://twitter.com/hairamanagara

Leave a Reply

Your email address will not be published. Required fields are marked *