ನನ್ನ ಬಗ್ಗೆ

ಎಸ್ ರುದ್ರೇಶ್ವರ

Email: hairamanagara@gmail.com

Ph: 9880439669

ಸಹೃದಯ ಓದುಗರೆ,
ಸಾಹಿತ್ಯ, ಕಲೆ, ಸಂಸ್ಕೃತಿ, ರಾಜಕೀಯ, ಸಾಮಾಜಿಕ, ವ್ಯಾಪಾರ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ರಾಮನಗರ ಜಿಲ್ಲೆ ಕರ್ನಾಟಕ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿರುವ ಜಿಲ್ಲೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ನಡೆಯುವ ಪ್ರಮುಖ ವಿಚಾರ, ಸಭೆ, ಸಮಾರಂಭ, ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳ ಮಾಹಿತಿ ಜತೆಗೆ ‘ರಾಮನಗರ ಜಿಲ್ಲೆ’ಯ ಇತಿಹಾಸವನ್ನು ‘ಹಾಯ್ ರಾಮನಗರ’ hairamanagara.in ಮೂಲಕ ತಿಳಿಸಲಾಗುವುದು. ಬ್ರೇಕಿಂಗ್ ವರದಿಗಳಿಗಾಗಿ ಆತುರ ಪಟ್ಟು ವರದಿಗಳನ್ನು ನೀಡುವುದಿಲ್ಲ. ವರದಿಗಳ ಖಚಿತತೆ ಲಭ್ಯವಾದ ನಂತರವಷ್ಟೆ ಪ್ರಕಟಿಸಲಾಗುತ್ತದೆ. ಸಮಾಜದಲ್ಲಿ ಏನಾಗುತ್ತಿದೆ ಎಂಬುದನ್ನು ಜನರು ಒಂದೇ ಕ್ಲಿಕ್ ಮೂಲಕ ತಿಳಿದು ಕೊಳ್ಳಬಹುದು. ವಸ್ತುನಿಷ್ಠ ವರದಿಗಳನ್ನು ನೀಡುವುದು ಮತ್ತು ಯಾವುದೇ ಪೂರ್ವಾಗ್ರಹವಿಲ್ಲದೆ ಮಾಹಿತಿ ನೀಡಲಿದ್ದೇವೆ. ಮಾಹಿತಿ, ಸಲಹೆಗಳಿಗೆ ಸದಾ ಸ್ವಾಗತ……

ನಿಮ್ಮ ಬೆಂಬಲದ ನಿರೀಕ್ಷೆಯಲ್ಲಿ,
ಎಸ್. ರುದ್ರೇಶ್ವರ
ಸಂಪಾದಕ
‘ಹಾಯ್ ರಾಮನಗರ’

ಎಸ್. ರುದ್ರೇಶ್ವರ ಪರಿಚಯ : ರಾಮನಗರದ ಎಸ್. ರುದ್ರೇಶ್ವರ ಅವರು ‘ಸಂಜೆ ಸಮಾಚಾರ’, ‘ಬೆಂಗಳೂರು ಖಡ್ಗ’, ‘ವಾರ್ತಾಭಾರತಿ’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ರಾಮನಗರ ಜಿಲ್ಲೆಯಲ್ಲಿ ಸಹಾಯಕ ವರದಿಗಾರನಾಗಿ ಎಂಟು ವರ್ಷ ಕೆಲಸ ಮಾಡಿದ್ದಾರೆ. ‘ಸನ್ಮಿತ್ರ’ ಸಂಜೆ ದಿನ ಪ್ರತಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ ಸಾಹಿತ್ಯದಲ್ಲಿ ಹಾಗೂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಜತೆಗೆ “ರಾಮನಗರ ಜಿಲ್ಲೆಯ ಸ್ಥಳನಾಮಗಳು” ಎಂಬ ವಿಯಷದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿ ಆಂದ್ರಪ್ರದೇಶದ ಕುಪ್ಪಂನಲ್ಲಿರುವ ದ್ರಾವಿಡ ವಿಶ್ವವಿದ್ಯಾನಿಲಯದಿಂದ ಎಂ.ಫಿಲ್ ಪದವಿಯನ್ನು ಪಡೆದಿದ್ದಾರೆ. ಈಗ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ “ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು” ಎಂಬ ವಿಷಯವನ್ನು ಕುರಿತು ಸಂಶೋಧನೆ (ಪಿಎಚ್.ಡಿ) ನಡೆಸುತ್ತಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.